ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ದೆಹಲಿ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಉಲ್ಲಂಘನೆ ಮಾಡಿದರೆ, 500 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸೂಚನೆ ಹೊರಡಿಸಿದೆ.
ಅಧಿಸೂಚನೆಯ ಈ ನಿಬಂಧನೆಯ ಅಡಿಯಲ್ಲಿನ ದಂಡವು ಖಾಸಗಿ 4 ಚಕ್ರದ ವಾಹನಗಳಲ್ಲಿ ಒಟ್ಟಿಗೆ ಪ್ರಯಾಣಿಸುವ ವ್ಯಕ್ತಿಗಳಿಗೆ ಅನ್ವಯವಾಗುವುದಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.
ಆರೋಗ್ಯ ಬುಲೆಟಿನ್ ಪ್ರಕಾರ, ರಾಷ್ಟ್ರೀಯ ರಾಜಧಾನಿಯಲ್ಲಿ ಬುಧವಾರ ಹೊಸ ಕೊರೋನಾ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆಯಾಗಿದೆ. ಹಿಂದಿನ ದಿನ ವರದಿಯಾದ 2,495 ಕ್ಕೆ ಹೋಲಿಸಿದರೆ 2,146 ಕ್ಕೆ ಇಳಿದಿದೆ, ಆದಾಗ್ಯೂ, ಸಾವಿನ ಸಂಖ್ಯೆ 8ಕ್ಕೆ ಏರಿದೆ.
ಕೊರೋನಾ ಪಾಸಿಟಿವಿಟಿ ದರವು ಶೇ. 17.83 ಕ್ಕೆ ಏರಿದೆ, ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದೆ.ಇದರಲ್ಲಿ 5,549 ರೋಗಿಗಳು ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.