ಎಂ ಪಿ ಎಂ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಅದೀನಕ್ಕೆ ಒಳಪಡಿಸುವಂತೆ ಕಾಲೇಜು ಮತ್ತು ಶಾಲೆಯ ಸಿಬ್ಬಂದಿ ವರ್ಗದವರಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮೈಸೂರು ಕಾಗದ ಕಾರ್ಖಾನೆಯು ಕಾರ್ಮಿಕರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 1986ರಲ್ಲಿ ಮೈಸೂರು ಪೇಪರ್ ಮಿಲ್ಸ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿತ್ತು. ಈ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಕಾರ್ಖಾನೆಯ ಅಧಿಕಾರಿಗಳೇ ಆಗಿದ್ದರು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕದಿಂದ ಸಂಗ್ರಹವಾಗುವ ಹಣದಿಂದ ಶಾಲಾ ಕಾಲೇಜು ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು.
ಈಗಿನ ಸಂದರ್ಭದಲ್ಲಿ ಸರ್ಕಾರವು ಕಾರ್ಖಾನೆಯ ಉತ್ಪಾದನೆಯನ್ನು ನಿಲ್ಲಿಸಿ ಕಾರ್ಖಾನೆಯನ್ನು ಖಾಸಗಿಕರಣ ಮಾಡಲು ಮುಂದಾಗಿದೆ. ಆದ್ದರಿಂದ ಕಾರ್ಖಾನೆಗೆ ಸೇರಿದ ಈ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗೆ ಉದ್ಯೋಗದ ಭದ್ರತೆ ಇಲ್ಲ. ಶಾಲಾ ಕಟ್ಟಡ, ಪೀಠೋಪಕರಣ, ಪಾಠೋಪಕರಣ ಹಾಗೂ ಸಿಬ್ಬಂದಿಗಳ ವೇತನಕ್ಕೂ ತೊಂದರೆ ಉಂಟಾಗುತ್ತಿರುವುದರಿಂದ ಎಂ ಪಿ ಎಂ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಅಧೀನಕ್ಕೆ ಒಳಪಡಿಸುವಂತೆ ಮನವಿ ಸಲ್ಲಿಸಲಾಯಿತು.