ಹರ್ ಘರ್ ತಿರಂಗಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಬೆಳಗ್ಗೆ ಚಾಲನೆ ನೀಡಿದ್ದಾರೆ. ತಮ್ಮ ಆರ್.ಟಿ. ನಗರ ನಿವಾಸದಲ್ಲಿ ರಾಷ್ಟ್ರದ ಧ್ವಜ ಹಾರಿಸುವ ಮುಖಾಂತರ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೊಮ್ಮಾಯಿ ಪತ್ನಿ, ಪುತ್ರ ಮತ್ತು ಸಚಿವ ಡಾ.ಸುಧಾಕರ್ ಅವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇಂದಿನಿಂದ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಧ್ವಜಾರೋಹಣ ಮಾಡಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಇಂದಿನಿಂದ ದೇಶದೆಲ್ಲೆಡೆ ಹರ್ ಘರ್ ತಿರಂಗಾ ನಡೀತಿದೆ. ರಾಜ್ಯದಲ್ಲಿ ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲ ಗ್ರಾಮ ಪಂಚಾಯ್ತಿಗಳಿಗೂ ಧ್ವಜ ವಿತರಣೆ ಮಾಡಲಾಗಿದೆ.
ಈಗಾಗಲೇ, 1 ಕೋಟಿ 8 ಲಕ್ಷ ಧ್ವಜಗಳನ್ನು ವಿತರಿಸಿದ್ದೇವೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಕಡೆ ತಿರಂಗಾ ಹಾರಿಸಲಾಗುತ್ತದೆ ಎಂದು ಹೇಳಿದ್ದಾರೆ.