ಈಚೆಗೆ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ ವಾಚ್ ತಂದಿರುವುದು ಹೊರತುಪಡಿಸಿ, ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಉದ್ದೇಶಿತ ಪರೀಕ್ಷೆಯಲ್ಲಿ ಗೋಕಾಕ್ ಪರೀಕ್ಷಾ ಕೇಂದ್ರದಲ್ಲೊಬ್ಬ ಅಭ್ಯರ್ಥಿ ಕೇಂದ್ರಕ್ಕೆ ಸ್ಮಾರ್ಟ್ ವಾಚ್ ತಂದಿರುವುದು ಪರೀಕ್ಷೆ ಆರಂಭವಾಗುತ್ತಿದ್ದಂತೆ ಪತ್ತೆಯಾಗಿದೆ. ತಕ್ಷಣ ವಶಪಡಿಸಿಕೊಳ್ಳಲಾಗಿದೆ. ಇತರೆ ಯಾವುದೇ ಅ ಕ್ರಮಗಳು ನಡೆದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಗೋಕಾಕ್‌ನಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬರು ತಮ್ಮ ಒಳ ಉಡುಪಿನಲ್ಲಿ ಸ್ಮಾರ್ಟ್‌ವಾಚ್ ಇಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ಹೋಗಿರುವುದನ್ನು ಪತ್ತೆಹಚ್ಚಲಾಗಿದೆ. ತಕ್ಷಣ ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ, ಬೇರೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.