Friday, April 18, 2025
Friday, April 18, 2025

ಅಮೃತ ಮಹೋತ್ಸವ ಬೊಮ್ಮಾಯಿ ಅವರಿಂದ ವಿಶೇಷ ಯೋಜನೆ ಘೋಷಣೆ

Date:

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ.

ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲದ ಸಹಾಯಧನ ಯೋಜನೆ ರೂಪಿಸಲಾಗಿದೆ ಎಂದರು.

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...