ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದೆ. ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ಸಿಬ್ಬಂದಿ ನೇಮಕ ಕಾರ್ಯ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿಯೂ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಗೊಳಿಸಲಾಗಿದೆ. ಬಾಲ ಬಿಚ್ಚಿದವರ ಹೆಡೆಮುರಿ ಕಟ್ಟಲಾಗಿದೆ. ರಾಜ್ಯದೆಲ್ಲೆಡೆ ಹೊಸ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.