ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ಕ್ರೀಡಾಂಗಣಗಳ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ಕ್ರೀಡಾಂಗಣಗಳ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ. ನಮ್ಮ ಸರ್ಕಾರ ಕ್ರೀಡೆ ಹಾಗೂ ಕ್ರೀಡಾಪಟುಗಳ ಕಲ್ಯಾಣಕ್ಕೆ ಆದ್ಯತೆಯನ್ನು ನೀಡಿದೆ.
ಯಾವುದನ್ನೂ ಚಿಂತೆ ಮಾಡದೆ ಧೈರ್ಯವಾಗಿ ಆಡಿ ಬನ್ನಿ. ಸರ್ಕಾರ ನಿಮ್ಮ ಜೊತೆ ಇದೆ ಎಲ್ಲಾ ದೃಷಿಯಿಂದ ನಿಮ್ಮ ಸುರಕ್ಷತೆಯನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಆಯ್ಕೆಯಾಗಿರವ 75 ಕ್ರೀಡಾ ಪಟುಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ರೀಡಾಪಟುಗಳ ಜೀವನಕ್ಕೆ ಭದ್ರತೆ ಬೇಕು ಎನ್ನುವುದನ್ನು ಸರ್ಕಾರ ಮನಗಂಡಿದೆ.
ಮನಸ್ಸಿನಲ್ಲಿ ಕ್ರೀಡೆಯನ್ನು ನನಗೋಸ್ಕರ ಹಾಗೂ ದೇಶಕ್ಕಾಗಿ ಪದಕ ಗೆಲ್ಲಲು ಆಡುತ್ತಿದ್ದೇನೆ ಎನ್ನುವುದನ್ನು ಮಾತ್ರ ಕ್ರೀಡಾಪಟುಗಳು ಮರೆಯಬಾರದು. ಮಿಕ್ಕಿದ್ದನ್ನು ಸರ್ಕಾರಕ್ಕೆ ಬಿಡಿ. ನಿಮ್ಮ ಸಾಧನೆಗಳಿಗೆ ತಕ್ಕಂತೆ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ ಎಂದರು.