ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾತನಾಡಿ ʻಗಣೇಶ ಕೂರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿಲ್ಲ, ನಮಾಜ್‌ಗೆ ಅವಕಾಶ ಕೊಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ. ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಈಗ ಇರುವ ನಿಯಮಗಳೇ ಮುಂದೆಯೂ ಇರಲಿದೆ. ನಮಾಜ್‌ಗೆ ಅವಕಾಶ ಕೊಡಲು ಸಾಧ್ಯವೇ ಇಲ್ಲ. ಶಾಲೆಗಳಲ್ಲಿ ಹೊಸ ಹೊಸ ಸಂಪ್ರದಾಯ ಹುಟ್ಟುಹಾಕಕಲು ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮುಸ್ಲಿಂ ಮುಖಂಡ ಉಮರ್ ಷರೀಫ್ ಸಹ ಈ ಬಗ್ಗೆ ಮಾತನಾಡಿದ್ದು, ಗಣಪ ಓಕೆ ಹಿಜಬ್‌ಗೂ ಹೀಗೆ ಅವಕಾಶ ಕೊಡಿ. ಒಂದು ಧರ್ಮಕ್ಕೆ ನ್ಯಾಯ ಇನ್ನೊಂದು ಧರ್ಮಕ್ಕೆ ಅನ್ಯಾಯ ಯಾಕೆ ಅಂತಾ ಪ್ರಶ್ನಿಸಿದ್ದಾರೆ.