ರಾಜ್ಯದಲ್ಲಿ ಕೆಲ ದಿನಗಳಿಂದ ತಗ್ಗಿದ್ದ ಮುಂಗಾರು ಮಳೆ ಇಂದಿನಿಂದ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23 ರಿಂದ 3 ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 24 ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.