Wednesday, October 2, 2024
Wednesday, October 2, 2024

ತಾಂಡಾ ಮತ್ತು ಹಟ್ಟಿ ಗಳಿಗೆ ಕಂದಾಯ ಗ್ರಾಮವಾಗಿ ಮಾನ್ಯತೆ- ಅಶೋಕ್

Date:

ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಹಾಗೂ ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೆ ಇದಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಅರ್.ಅಶೋಕ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯ 453 ತಾಂಡಾಗಳನ್ನು ಪೈಲೇಟ್ ಯೋಜನೆಯಡಿ ಕೈಗೆತ್ತಿಕೊಂಡು ಕಂದಾಯ ಗ್ರಾಮಗಳನ್ನಾಗಿ ಮುಂದಿನ ಎರಡು ತಿಂಗಳಲ್ಲಿ ಮಾಡಲಾಗುತ್ತದೆ. ಇದಲ್ಲದೆ ಪ್ರಸ್ತುತ ತಾಂಡಾ, ಹಟ್ಟಿಯಲ್ಲಿ ಅನಧಿಕೃತವಾಗಿ ವಾಸಿಸುವರನ್ನು ಅಧಿಕೃತಗೊಳಿಸಿ ಎಷ್ಟು ವಿಸ್ತೀರ್ಣದಲ್ಲಿ ಇದ್ದಾರೆ ಅಷ್ಟು ಜಾಗದ ನಿವೇಶನ, ಮನೆ ಅವರ ಹೆಸರಿಗೆ ನೋಂದಣಿ ಮಾಡಿಸಿ ಮನೆ ಕಟ್ಟಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ. ರಾಜ್ಯದಲ್ಲಿ ಏಕಕಾಲದಲ್ಲಿ 30 ಸಾವಿರ ಜನರಿಗೆ ಹಕ್ಕು ಪತ್ರ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ.

ರೈತ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಿದೆ. ಕೃಷಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣ ಪಡೆಯಬೇಕು ಎಂಬ ನಿಟ್ಟಿನಲ್ಲಿ ಇಂಜಿನೀಯರಿಂಗ್, ವೈದ್ಯಕೀಯ, ಶಿಕ್ಷಣ, ವಕೀಲ ವೃತ್ತಿಯ ಉನ್ನತ ಶಿಕ್ಷಣ ಪಡೆಯಲು ಅವರ ಮಕ್ಕಳಿಗೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸವಿತಾ, ಕುಂಬಾರ, ಬಡಿಗೇರ್ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ. ಉದ್ಯೋಗ ನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಮನೆ‌, ಮನೆಗೆ ಕಂದಾಯ ದಾಖಲೆಗಳು ಅಭಿಯಾನದಲ್ಲಿ 50 ಸಾವಿರ ಜನರಿಗೆ ಜಾತಿ, ಆದಾಯ, ಅಟ್ಲಾಸ್, ಪಹಣಿ ಪತ್ರಗಳನ್ನು ನೀಡಲಾಗಿದೆ.

ಕಳೆದ 10 ಗ್ರಾಮ ವಾಸ್ತವ್ಯದಲ್ಲಿ ಇಂದಿಲ್ಲಿ ದಾಖಲೆ ಪ್ರಮಾಣದಲ್ಲಿ 28,900 ಜನರಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದ ಅವರು ಇದು ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಪ್ರತಿಫಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...