Thursday, March 19, 2026
Thursday, March 19, 2026

ದೇಶದ ನಕಲಿ ವಿವಿ ಪಟ್ಟಿಯಲ್ಲಿ ರಾಜ್ಯದ ಒಂದು ವಿವಿ ಸೇರಿದೆ

Date:

ವಿಶ್ವವಿದ್ಯಾನಿಲಯ ಅನುದಾನ ಆಯೋಗವು “ಸ್ವಯಂ ಶೈಲಿಯ ವಿಶ್ವವಿದ್ಯಾನಿಲಯಗಳನ್ನು” ನಕಲಿ ಎಂದು ಘೋಷಿಸಿದೆ. ಈ ಸಂಸ್ಥೆಗಳನ್ನು ಉನ್ನತ ಶಿಕ್ಷಣ ಸಂಸ್ಥೆಯು ಗುರುತಿಸಿಲ್ಲ ಮತ್ತು ಯಾವುದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿಲ್ಲ ಎಂದು ಉನ್ನತ ಶಿಕ್ಷಣ ಸಂಸ್ಥೆ ತಿಳಿಸಿದೆ.

ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 21 ಸ್ವಯಂ ಶೈಲಿಯ, ಮಾನ್ಯತೆ ಪಡೆಯದ ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ ಮತ್ತು ಇವುಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ ಎಂದು ಸಂಸ್ಥೆಯ ಕಾರ್ಯದರ್ಶಿ ರಜನೀಶ್ ಜೈನ್ ಅವರು ತಿಳಿಸಿದ್ದಾರೆ.

ದಿಲ್ಲಿ ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದೆ.ಉಳಿದೆಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೋಲಿಸಿದರೆ ದಿಲ್ಲಿಯಲ್ಲೇ ಇಂತಹ ನಕಲಿ ಸಂಸ್ಥೆಗಳು ಹೆಚ್ಚಿದೆ ಎಂದು ಮಾದ್ಯಮಯೊಂದು ತನ್ನ ವರದಿಯಲ್ಲಿ ತಿಳಿಸಿದೆ.

ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ & ಫಿಸಿಕಲ್ ಹೆಲ್ತ್ ಸೈನ್ಸಸ್, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಶನಲ್ ಯೂನಿವರ್ಸಿಟಿ, ಎಡಿಆರ್-ಕೇಂದ್ರಿತ ಜುರಿಡಿಕಲ್ ಯೂನಿವರ್ಸಿಟಿ, ಇಂಡಿಯನ್ ಇನ್‌ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್- ಉದ್ಯೋಗ ಮತ್ತು ಆಧ್ಯಾತ್ಮಿಕ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)ಗಳನ್ನು ನಕಲಿ ಎಂದು ಪಟ್ಟಿ ಮಾಡಲಾಗಿದೆ.

ಉತ್ತರ ಪ್ರದೇಶವು ಅಂತಹ ನಾಲ್ಕು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದ್ದು, ಅವರುಗಳನ್ನು ಗಾಂಧಿ ಹಿಂದಿ ವಿದ್ಯಾಪೀಠ, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ನೇತಾಜಿ ಸುಭಾಷ್ ಚಂದ್ರ ಬೋಸ್ ವಿಶ್ವವಿದ್ಯಾಲಯ (ಮುಕ್ತ ವಿಶ್ವವಿದ್ಯಾಲಯ) ಮತ್ತು ಭಾರತೀಯ ಶಿಕ್ಷಾ ಪರಿಷತ್ ಎಂದು ಗುರುತಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಎರಡು ಮತ್ತು ಕರ್ನಾಟಕ, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ತಲಾ ಒಂದು ವಿಶ್ವವಿದ್ಯಾಲಯಗಳು ಸಹ ಪಟ್ಟಿಯಲ್ಲಿವೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ ‘ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯುನಿವರ್ಸಿಟಿ ಎಜುಕೇಶನ್ ಸೊಸೈಟಿ’ ಹೆಸರೂ ಸಹ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...