ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಅತ್ಯುತ್ತಮ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದಂತ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗುತ್ತದೆ. 2022ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದಿಂದ ಇಂದು ಪ್ರಕಟಿಸಲಾಗಿದೆ.
46 ಶಿಕ್ಷಕರಿಗೆ ಪ್ರಶಸ್ತಿಯ ಗರಿಮೆ ಸಂದಿದೆ. ಕರ್ನಾಟಕದ ಚಿತ್ರದುರ್ಗದ ಶಿಕ್ಷಕ ಟಿ.ಪಿ ಉಮೇಶ್ ಅವರಿಗೂ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಸರ್ಕಾರಿ ಶಾಲೆಯಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಕ್ಲಾಸ್ ಸ್ಥಾಪನೆ ಸೇರಿದಂತೆ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡಿದ ಗಣನೀಯ ಸೇವೆಗಾಗಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ 2022 ಭಾಜನರಾದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಅಮೃತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಪಿ. ಉಮೇಶ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಹೇಳಿದ್ದಾರೆ.