Saturday, December 6, 2025
Saturday, December 6, 2025

ಚಿತ್ರದುರ್ಗ ಶರಣರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದೂರು ದಾಖಲು

Date:

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ 2ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ, ಮಠದ ಭಕ್ತರೆನ್ನಲಾದಂತ ಮೈಸೂರಿನ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ 4,5ನೇ ಆರೋಪಿಗಳಾಗಿದ್ದಾರೆ.

ಅಂದಹಾಗೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ನೀಡಿದಂತ ದೂರಿನ ಮೇರೆಗೆ, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ನಾಡಿನ ಪ್ರತಿಷ್ಠಿತ ಮಠವಾದಂತ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಎಫ್ ಐ ಆರ್ ದಾಖಲಾಗಿದೆ.

ಇಬ್ಬರು ವಿದ್ಯಾರ್ಥಿನಿಯರಲ್ಲಿ ಒಬ್ಬರಿಗೆ ಮೂರೂವರೆ ವರ್ಷಗಳಿಂದ, ಮತ್ತೊಬ್ಬ ವಿದ್ಯಾರ್ಥಿನಿಗೆ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮಾಡುತ್ತಿರೋದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಸಹಕರಿಸಿದಂತ ಉಳಿದ ಆರೋಪಿಗಳ ಬಗ್ಗೆಯೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ಸಮಯದಲ್ಲಿ ವಿದ್ಯಾರ್ಥಿನಿಯರು ಹೇಳಿಕೆ ಆದರಿಸಿ ದೂರು ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...