ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆ ಜೋರಾಗಿದ್ದು, ಬಾಗಲಕೋಟೆಯ ಇಳಕಲ್ನಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲ್ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಗಣೇಶ ಹಬ್ಬಕ್ಕೆ ಎಲ್ಲಡೆ ತಯಾರಿ ಜೋರಾಗಿದೆ. ಸಾಮಾನ್ಯವಾಗಿ ಮಣ್ಣಿನಲ್ಲಿ ವಿವಿಧ ಬಗೆಯ ಗಣಪನ ಮೂರ್ತಿಗಳನ್ನು ನೋಡಿರ್ತಿವಿ. ಆದ್ರೆ, ಬಾಗಲಕೋಟೆಯ ಇಳಕಲ್ನಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲ್ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಲಾಗಿದೆ.
ನಗರದ ವಿಜಯ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಇಂತಹ ಪ್ರಯತ್ನವೊಂದಕ್ಕೆ ಮುಂದಾಗಿದ್ದು, ಸುಮಾರು 20 ಅಡಿ ಎತ್ತರದ ಗಣೇಶ ಮೂರ್ತಿಯನ್ನ ಸಿದ್ಧಪಡಿಸಲಾಗಿದೆ.