Wednesday, May 6, 2026
Wednesday, May 6, 2026

ಈ ಬಾರಿ ಹೊಸ ಮೆರುಗಿನಲ್ಲಿ ಮೈಸೂರು ದಸರಾ

Date:

ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ವಿವಿಧ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೋನಾ ಕಾರಣದಿಂದಾಗಿ ಕಳೆದ 2 ವರ್ಷಗಳಿಂದ ಸಾಧಾರಣ ದಸರಾ ಉತ್ಸವ ಆಚರಿಸಲಾಗಿತ್ತು. ಆದ್ದರಿಂದ ಈ ಬಾರಿ ಅದ್ಧೂರಿ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಮಾಹಿತಿ ನೀಡಿದ್ದಾರೆ.

ಅದ್ಧೂರಿ ದಸರಾ ಉತ್ಸವ ಆಚರಣೆ ಕುರಿತಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಉತ್ಸವದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮೈಸೂರಿನ ಜಿ.ಪಂ. ಆವರಣದಲ್ಲಿರುವ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನವರಾತ್ರಿಯ ದಿನಗಳಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ-ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್‍ಗಳು ಮತ್ತು ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಂತ್ರಣದಲ್ಲಿರುವುದರಿಂದ ಎಲ್ಲಾ ಚಟುವಟಿಕೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ, ಈ ಬಾರಿಯ ದಸರಾದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಎಸ್‍ಪಿ ಆರ್.ಚೇತನ್ ಮಾತನಾಡಿ, ಈ ಬಾರಿಯ ದಸರಾದಲ್ಲಿ ನಡೆಯುವ ಯುವ ದಸರಾ ಹಾಗೂ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಬಾಲಿವುಡ್ ನೈಟ್ ಹಾಗೂ ಸ್ಯಾಂಡಲ್‍ವುಡ್ ನೈಟ್ ಎಂಬ ಕಾರ್ಯಕ್ರಮ ನಡೆಸಲಾಗುತ್ತಿದೆ. ಬಾಲಿವುಡ್ ಮತ್ತು ಸ್ಯಾಂಡಲ್‍ವುಡ್‍ನ ಹಲವಾರು ಸಂಗೀತಗಾರರು ಹಾಗೂ ನಟರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಮಾತನಾಡಿ, ಈ ಬಾರಿಯ ದಸರಾದಲ್ಲಿ ಪ್ರಾಯೋಜಕತ್ವ ವಹಿಸುವ ಕಂಪೆನಿಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ದಸರಾ ಉತ್ಸವದ ಆಚರಣೆಗಾಗಿ 16 ಉಪಸಮಿತಿಗಳನ್ನು ರಚಿಸಲಾಗಿದೆ. ಈ ಉಪಸಮಿತಿಗಳ ವ್ಯಾಪ್ತಿಯಲ್ಲಿ ಪ್ರತಿದಿನ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ವಿವರಣೆ ನೀಡಿದ್ದಾರೆ.

ಸಭೆಯಲ್ಲಿ ಜಿಪಂ ಸಿಇಒ ಪೂರ್ಣಿಮಾ, ಡಿಸಿಪಿ ಗೀತಾ ಪ್ರಸನ್ನ ಮತ್ತಿತರ ಅಕಾರಿಗಳು, ವಿವಿಧ ಕಂಪೆನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...