ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬಡಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಅಮೃತೋತ್ಸವ ಮನೆ ಯೋಜನೆಯಡಿ ಬಿಹೆಚ್ ಕೆ ಫ್ಲಾಟ್ ಖರೀದಿಸುವ ಆರ್ಥಿಕ ಹಿಂದುಳಿದ ನಿವೇಶನ ರಹಿತರಿಗೆ 5 ಲಕ್ಷ ರೂ. ಸಹಾಯಧನ ನೀಡಲು ಬಿಬಿಎಂಪಿ ಚಿಂತನೆ ನಡೆಸಿದೆ.
ನಗರದಲ್ಲಿ 20*30 ಅಥವಾ ಕಡಿಮೆ ಅಳತೆಯ ಸ್ವಂತ ನಿವೇಶ ಹೊಂದಿದ ಆರ್ಥಿಕ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಈ ಯೋಜನೆಯಿಂದ ಮನೆ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಆದರೆ ನಿವೇಶನ ಖರೀದಿಸಲು ಆಗದ ಬಡವರು ಸ್ವಂತ ಮನೆಕಟ್ಟಲು ಆಗುತ್ತಿಲ್ಲ. ಹೀಗಾಗಿ ಒಂಟಿ ಮನೆ ಯೋಜನೆಯಡಿ ನೀಡುವ ಸ್ವಲ್ಪ ಅನುದಾನವನ್ನು ಸರ್ಕಾರದ ವಿವಿಧ ಯೋಜನೆಗಳಡಿ ನಿರ್ಮಿಸಲಾದ ಮನೆಗಳ ಖರೀದಿಗೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ ಎಂದರು.
ಈ ಕುರಿತು ಮಾಹಿತಿ ನೀಡಿರುವ ಪಾಲಿಕೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಡಾ.ರಾಮ್ ಪ್ರಸಾದ್ ಮನೋಹರ್, ಬಿಡಿಎ ಕೊಳಗೇರಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸುವ ಅಪಾರ್ಟ್ ಮೆಂಟ್ ಖರೀದಿಗೆ ಬಡವರಿಗೆ 5 ಲಕ್ಷ ರೂ. ನೆರವು ನೀಡುವ ಪ್ರಸ್ತಾವನೆಗೆ ಮುಖ್ಯ ಆಯುಕ್ತರು ಒಪ್ಪಿಗೆ ನೀಡಿದ್ದು, ಆಡಳಿತಾಧಿಕಾರಿಗಳ ಸಮ್ಮತಿ ಬಾಕಿ ಇದೆ ಎಂದು ಹೇಳಿದ್ದಾರೆ.