ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದ್ದು ಸಭೆಯಲ್ಲಿ ಚಿತ್ರದುರ್ಗ ಮತ್ತು ಗದಗ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಪಾಲ್ಗೊಂಡು ಬೆಳೆ ರೈತರಿಗಾದ ಹಾನಿಬಗ್ಗೆ ಚರ್ಚಿಸಿ ಕೇಂದ್ರದ ಗಮನಕ್ಕೆ ತಂದರು.
ಸಭೆಯಲ್ಲಿ ಇತರ ಸಚಿವರಾದ
ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.