ಬೀದಿ ನಾಯಿಗಳು ಕಚ್ಚಿದರೆ ಆಹಾರ ಹಾಕಿದವರೇ ಹೊಣೆಗಾರರು. ಅವರಿಂದಲೇ ನಾಯಿಗೆ ಲಸಿಕೆ ಹಾಕಿಸಬಹುದು ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ನಾಯಿಗಳು ಕಚ್ಚಿದರೆ ಅದಕ್ಕೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ ಮಾಡಬೇಕಾದೀತು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ನಾಯಿ ಕಡಿತಕ್ಕೆ ಒಳಗಾದ ವ್ಯಕ್ತಿಗಳ ವೈದ್ಯಕೀಯ ವೆಚ್ಚವನ್ನು ಆಹಾರ ಹಾಕುವವರು ಭರಿಸಬೇಕು. ಜೊತೆಗೆ ಅವುಗಳಿಗೆ ಲಸಿಕೆ ಹಾಕುವ ಜವಾಬ್ದಾರಿಯನ್ನು ಹೊರಬೇಕು. ನಾಯಿಗಳನ್ನು ಪ್ರೀತಿಸಿದರೆ ಸಾಲದು, ಅವುಗಳ ಬಗ್ಗೆ ಕಾಳಜಿ ತೋರಬೇಕು. ಬೀದಿ ನಾಯಿಗಳು ಅಮಾಯಕರಿಗೆ ಹಾನಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಪೀಠ ಹೇಳಿದೆ.