Saturday, April 19, 2025
Saturday, April 19, 2025

ಅರಣ್ಯ ಸಂರಕ್ಷಣೆಯ ಮಹತ್ವ ಎಲ್ಲರೂ ಅರಿಯಬೇಕು- ಸೆಲ್ವಮಣಿ

Date:

ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಅರಣ್ಯ ಅಂದರೆ ಕೇವಲ ಮರಗಳು ಮಾತ್ರವಲ್ಲ. ಅಸಂಖ್ಯ ಜೀವ ಸಂಕುಲಗಳನ್ನು ಒಳಗೊಂಡ ಜೀವ ವೈವಿಧ್ಯ ವ್ಯವಸ್ಥೆಯಾಗಿದೆ. ಇದರ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ. ಅಂತಹ ರಾಷ್ಟ್ರೀಯ ಸಂಪತ್ತಿನ ರಕ್ಷಣೆಯ ಕಾರ್ಯದಲ್ಲಿ ತಮ್ಮ ಜೀವವನ್ನು ತೆತ್ತವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಯ ಪ್ರತಿಜ್ಞೆ ಮಾಡುವುದೇ ಈ ಹುತಾತ್ಮರಿಗೆ ನೀಡಬಹುದಾದ ನಿಜವಾದ ಶ್ರದ್ಧಾಂಜಲಿ ಎಂದು ಹೇಳಿದರು.

ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್.ಮಾನು, ಗಡಿಯಲ್ಲಿ ಯೋಧರು ದೇಶವನ್ನು ರಕ್ಷಿಸುವ ಕಾರ್ಯ ಮಾಡಿದರೆ, ದೇಶದ ಒಳಗೆ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿಯೂ ಹೆಚ್ಚುತ್ತಿದೆ.

ಅರಣ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತ. ಅರಣ್ಯವನ್ನು ಸಂರಕ್ಷಿಸುವುದರಿಂದ ಮಾತ್ರ ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯವನ್ನು ನೀಡಲು ನಮಗೆ ಸಾಧ್ಯವಿದೆ ಎಂದು ಹೇಳಿದರು.

ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣ ಬಲಿದಾನ ಮಾಡಿದ ಮಹನೀಯರ ಬಲಿದಾನ ವ್ಯರ್ಥವಾಗುವುದಿಲ್ಲ. ಅರಣ್ಯ ಸಂರಕ್ಷಣೆಯ ನಮ್ಮ ಬದ್ದತೆಯನ್ನು ಇದು ಇನ್ನಷ್ಟು ಹೆಚ್ಚಿಸುತ್ತದೆ. ಅಂತಹ ಹುತಾತ್ಮರ ಕುಟುಂಬದೊಂದಿಗೆ ಇಲಾಖೆ ಸದಾ ಇರುತ್ತದೆ. ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಗಾಗಿ ಸ್ವಯಂ ಯೋಧರಾಗಬೇಕು ಎಂದು ಶಿವಮೊಗ್ಗ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಈ.ಶಿವಶಂಕರ್ ಅವರು ಕರ್ತವ್ಯದ ಸಂದರ್ಭದಲ್ಲಿ ಪ್ರಾಣ ಅರ್ಪಿಸಿದ ಅಧಿಕಾರಿಗಳ ಪಟ್ಟಿಯನ್ನು ವಾಚಿಸಿದರು. ಅತಿಥಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪೊಲೀಸ್ ತಂಡದಿಂದ ಕುಶಾಲು ತೋಪು ಹಾರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಐ.ಎಂ.ನಾಗರಾಜ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...