Wednesday, October 2, 2024
Wednesday, October 2, 2024

ಚಂಡಿಘರ್ ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯ ಹೀನ ಕೃತ್ಯಕ್ಕೆ ಪ್ರತಿಭಟನೆ

Date:

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸೆರೆಹಿಡಿದ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತನಿಗೆ ಕಳುಹಿಸಿದ್ದು, ಈ ವಿಡಿಯೋಗಳು ವೈರಲ್ ಆಗಿವೆ. ವಿಷಯ ತಿಳಿದ ಎಂಟು ಮಂದಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ವಿದ್ಯಾರ್ಥಿನಿಯರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ವಾಹನಗಳು ಕೂಡ ಆಕ್ರೋಶದ ಕಿಚ್ಚಿಗೆ ಧ್ವಂಸಗೊಂಡಿವೆ

ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ಕ್ರಮ ಕೈಗೊಳ್ಳುವ ಬದಲು ವಿಷಯವನ್ನು ಹತ್ತಿಕ್ಕುತ್ತಿದೆ ಎಂದು ಬಾಲಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಹಿರಿಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಶಿಮ್ಲಾ ಮೂಲದ ವಿದ್ಯಾರ್ಥಿನಿಯೊಬ್ಬಳು ಶಿಮ್ಲಾದಲ್ಲಿ ವಾಸಿಸುವ ತನ್ನ ಗೆಳೆಯನೊಂದಿಗೆ ಹಂಚಿಕೊಂಡಿದ್ದಾಳೆ. ಅದನ್ನು ಆತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಡಿಯೋವನ್ನು ನೋಡಿದ ಎಂಟು ವಿದ್ಯಾರ್ಥಿನಿಯರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವಳ ಸ್ಥಿತಿ ಚಿಂತಾಜನಕವಾಗಿದೆ.

ಸದ್ಯ ಕೃತ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ವೀಡಿಯೊಗಳನ್ನು ಸಂಗ್ರಹಿಸುವ ಉದ್ದೇಶವೇನು? ಎಂಬಿತ್ಯಾದಿ ಆಯಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡ ಶಿಮ್ಲಾದ ವ್ಯಕ್ತಿಯ ಬಂಧನಕ್ಕೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಶದಲ್ಲಿರುವ ವಿದ್ಯಾರ್ಥಿನಿಯೂ ಹಿಮಾಚಲದವಳೇ, ಹುಡುಗನೂ ಅಲ್ಲಿಯವನೇ. ಹಾಗಾದರೆ ಇವರಿಬ್ಬರು ಯಾಕೆ ಹೀಗೆ ಮಾಡಿದರು? ಈ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...