Wednesday, July 8, 2026
Wednesday, July 8, 2026

ನಮ್ಮ ಕ್ಲಿನಿಕ್ ಶೀಘ್ರದಲ್ಲೇ ರಾಜ್ಯಾದ್ಯಂತ ವಿಸ್ತರಣೆ- ಡಾ.ಸುಧಾಕರ್

Date:

ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತಹ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿರುವಂತಹ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ರಾಜ್ಯಾದ್ಯಂತ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ. ಈಗಾಗಲೇ ಬೆಂಗಳೂರಿನಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು, ರಾಜ್ಯಾಧ್ಯಂತ ವಿಸ್ತರಣೆ ಮಾಡುವಂತ ಗುರಿಯನ್ನು ಹೊಂದಲಾಗಿದೆ ಎಂದಿದ್ದಾರೆ.

ಬೆಂಗಳೂರಿನ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಲಿದೆ. ಇತರೆ ಜಿಲ್ಲೆಗಳಲ್ಲಿ 195 ಸೇರಿದಂತೆ ಒಟ್ಟು 438 ನಮ್ಮ ಕ್ಲಿನಿಕ್ ಗಳನ್ನು ಅಕ್ಟೋಬರ್ ಅಂತ್ಯದೊಳಗೆ ಸಂಪೂರ್ಣವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಮ್ಮ ಕ್ಲಿನಿಕ್ ಗಳು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸುತ್ತಿವೆ. ಈ ಕ್ಲಿನಿಕ್ ಗಳಲ್ಲಿ ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ತಪಾಸಣೆ ಬಳಿಕ, ಉಚಿತ ಔಷಧ ವಿತರಣೆ ಮಾಡಲಾಗುತ್ತಿದೆ.

ಈ ಕ್ಲಿನಿಕ್ ನಲ್ಲಿ ಬಾಣಂತಿಯರು, ಗರ್ಭಿಣಿಯರು, ನವಜಾತ ಶಿಶು, ಮಕ್ಕಳು, ಕುಟುಂಬ ಕಲ್ಯಾಣ ಯೋಜನೆ ಸೇರಿದಂತೆ 12 ಸೇವೆಗಳನ್ನು ನೀಡಲಾಗುವುದು. ಪ್ರತಿ ಕ್ಲಿನಿಕ್ ನಲ್ಲಿ ತಲಾ ಒಬ್ಬ ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಗ್ರೂಪ್ ಡಿ ಸಿಬ್ಬಂದಿ ಇರುತ್ತಾರೆ. ಪ್ರತಿ ಕ್ಲಿನಿಕ್ ಗೆ ಬಿಬಿಎಂಪಿಯಲ್ಲಿ 36.45 ಲಕ್ಷ ರೂ. ಇತರೆ ಜಿಲ್ಲೆಯಲ್ಲಿ 34.46 ಲಕ್ಷ ರೂ. ವರೆಗೆ ವೆಚ್ಚವಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...