ಮೈಸೂರು ದಸರಾ ಮಹೋತ್ಸವ ನಂತರ ದಸರಾ ಉತ್ಸವಕ್ಕೆ ನಮ್ಮ ಶಿವಮೊಗ್ಗವೇ ಹೆಸರುವಾಸಿ ಎಂದು ಮಹಿಳಾ ದಸರಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರೇಖಾ ರಂಗನಾಥ್ ಅವರು ತಿಳಿಸಿದ್ದಾರೆ.
ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಹಿಳಾ ದಸರಾ ಕುರಿತು ಮಾಹಿತಿ ಹಂಚಿಕೊಂಡರು. ಈಗಾಗಲೇ ಮಹಿಳಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಒಳ್ಳೆಯ ರೀತಿಯಲ್ಲಿ ನಡೆದಿವೆ.
ಮುಂದಿನ ಸೆಪ್ಟೆಂಬರ್ 26ರಂದು ಮಹಿಳಾ ದಸರಾ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮಹಿಳಾ ದಸರಾದ ಅಂಗವಾಗಿ ಶಿವಮೊಗ್ಗದ ಒಂಬತ್ತು ಮಹಿಳಾ ಸಾಧಕಿಯರಿಂದ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ.
ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಸೆ.27ರಂದು ಸಂಜೆ 4 ಗಂಟೆಗೆ ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೆ ಮಹಿಳಾ ಸ್ವಾತಂತ್ರ್ಯ ನಡಿಗೆ ಹಾಗೂ ವಿವಿಧ ಮಹಿಳಾ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅತ್ಯುತ್ತಮವಾಗಿ ಸಾಂಸ್ಕೃತಿಕ ಉಡುಗೆಗಳನ್ನು ಧರಿಸಿದ ಮೂರು ಮಹಿಳೆಯರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ಮಹಿಳಾ ದಸರಾ ಸಮಿತಿಯ ಸದಸ್ಯರಾದ ಎಸ್. ಜ್ಞಾನೇಶ್ವರ್ , ಶ್ರೀಮತಿ ಆರತಿ ಆ.ಮ .ಪ್ರಕಾಶ್ , ಶ್ರೀಮತಿ ಸಂಗೀತಾ ನಾಗರಾಜ್ , ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಅನುಪಮಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.