ರಾಜ್ಯದಲ್ಲಿ 6 -7 ಲಕ್ಷ ಅಕ್ರಮ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ಹಂತ ಹಂತವಾಗಿ ಆದ್ಯತೆ ಮೇಲೆ ಪ್ರಕ್ರಿಯೆ ಪೂರ್ಣಗೊಳಿಸಲು ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಅವರು, ಅಕ್ರಮ ಸಕ್ರಮದ ಬಗ್ಗೆ ರೈತರಿಂದ ಒತ್ತಾಯ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕೃಷಿ ನೀರಾವರಿ ಪಂಪ್ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆದವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಪ್ರತ್ಯೇಕ ಟಿಸಿ(ವಿದ್ಯುತ್ ಪರಿವರ್ತಕ) ಅಳವಡಿಸುವಂತೆ ಕೋರಿ ಸುಮಾರು 7 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಹಂತ ಹಂತವಾಗಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.