ಶಿವಮೊಗ್ಗದಲ್ಲಿ ಶಂಕಿತ ಉಗ್ರರು ದೊಡ್ಡ ಪ್ರಮಾಣದ ಸ್ಫೋಟಕ್ಕೆ ಸಿದ್ಧರಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಅವರು ಹೇಳಿದ್ದಾರೆ.
ಶಿವಮೊಗ್ಗದ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಂಧಿತರಿಂದ ಒಂದು ಕಾರು, 2 ಲ್ಯಾಪ್‌ಟಾಪ್ ಸಹಿತ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸುತ್ತಿದ್ದ ಅನೇಕ ವಸ್ತುಗಳನ್ನು ವಶಪಡಿಸಲಾಗಿದೆ ಎಂದು ಬಿ.ಎಂ. ಲಕ್ಷ್ಮೀಪ್ರಸಾದ್ ಅವರು ಎಂದು ಮಾಹಿತಿ ನೀಡಿದ್ದಾರೆ.
ಆ.15ರಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬವರನ್ನು ಮುಸ್ಲಿಂ ಯುವಕರು ಇರಿದು ಕೊಲ್ಲಲು ಪ್ರಯತ್ನಿಸಿದ್ದರು. ಈ ಸಂಬಂಧ 4ಜನರನ್ನು ಬಂಧಿಸಲಾಗಿತ್ತು. ಬಂಧಿತ ಜಬೀವುಲ್ಲಾನ ವಿಚಾರಣೆಯಿಂದ ಶಾರೀಖ್ ಬಗ್ಗೆ ಮಾಹಿತಿ ಸಿಕ್ಕಿತು. ಇವನ ಜೊತೆ ಮಾಜ್ ಮತ್ತು ಯಾಸೀನ್ ಸಂಬಂಧ ಇರುವುದು ಗೊತ್ತಾ
ಯಿತು. ಇವರು ಕಾನೂನು ಬಾಹಿರ ಚಟುವಟಿಕೆ ಮತ್ತು ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವುದು ಕಂಡುಬಂದಿದೆ. ಇದುವರೆಗೆ ಮಾಜ್ ಹಾಗೂ ಯಾಸೀನ್ ಅವರನ್ನು ಮಾತ್ರ ಬಂಧಿಸಲಾಗಿದೆ. ಶಾರೀಖ್ ನಾಪತ್ತೆಯಾಗಿದ್ದು, ಅವನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಪ್ರಕರಣದಲ್ಲಿ ಅವನೇ ಎ1 ಆರೋಪಿಯಾಗಿದ್ದಾನೆ. ಅವನು ಸಿಕ್ಕರೆ ಇನ್ನಷ್ಟು ಮಾಹಿತಿ ಸಿಗುತ್ತದೆ ಎಂದು ಬಿ.ಎಂ. ಲಕ್ಷ್ಮೀಪ್ರಸಾದ್ ಅವರು ಹೇಳಿದ್ದಾರೆ.
ಇದುವರೆಗೆ 11 ಕಡೆ ದಾಳಿ ಮಾಡಲಾಗಿದೆ. ಬಂಧಿತರಿಂದ 14 ಮೊಬೈಲ್, 1 ಡಾಂಗಲ್, 2 ಲ್ಯಾಪ್‌ಟಾಪ್, ಒಂದು ಪೆನ್‌ಡ್ರೈವ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್ ಅವಶೇಷಗಳು ಸಿಕ್ಕಿವೆ ಎಂದು ಮಾಹಿತಿ ತಿಳಿಸಿದ್ದಾರೆ.
ಆರೋಪಿಗಳು ಸ್ವಾತಂತ್ರ್ಯ ದಿನಾಚರಣೆಯ ನಂತರ ರಾಷ್ಟ್ರಧ್ವಜವನ್ನು ಸುಟ್ಟು ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಕೊಂಡಿದ್ದಾರೆ. ಈಗ ಮೊಬೈಲ್‌ನಲ್ಲಿ ವೀಡಿಯೋಗಳು ಸಿಕ್ಕಿವೆ. ಬಾಂಬ್ ಸ್ಫೋಟದ ಜಾಗದಿಂದ ಸ್ವಲ್ಪ ದೂರದಲ್ಲಿ ಸುಟ್ಟಿರುವ ರಾಷ್ಟ್ರಧ್ವಜದ ತುಣುಕುಗಳು ಸಿಕ್ಕಿವೆ ಎಂದು ಎಸ್‌ಪಿ ಅವರು ತಿಳಿಸಿದ್ದಾರೆ.
ಬಾಂಬ್ ತಯಾರಿಕೆ ಮಾಹಿತಿ
ಶಂಕಿತರು ಬಾಂಬ್ ತಯಾರಿಗೆ ಬೇಕಾದ ತರಬೇತಿಯನ್ನು ಐಸಿಸ್‌ನಿಂದ ಪಡೆದಿದ್ದರು. ಅವರಿಗೆ ಅನೇಕ appಗಳ ಮಾಹಿತಿ ಕಳುಹಿಸಲಾಗಿತ್ತು. ಅದನ್ನು ಅವರು ಪೆನ್‌ಡ್ರೈವ್‌ನಲ್ಲಿ ಇಟ್ಟುಕೊಂಡಿದ್ದರು. ಅದನ್ನು ನೋಡಿ ಅದಕ್ಕೆ ಬೇಕಾದ ಟೈಮರ್, ರಿಲೇ ಸರ್ಕ್ಯೂಟ್ ಗಳನ್ನು ಅಮೆಜಾನ್ ಆಯಪ್ ಮುಖಾಂತರ ಖರೀದಿಸಿದೆ. ಶಿವಮೊಗ್ಗದಲ್ಲಿ 9 ವೋಲ್ಟ್ನ 2 ಬ್ಯಾಟರಿ, ಸ್ವಿಚ್, ವೈರ್, ಮ್ಯಾಚ್ ಬಾಕ್ಸ್ ಮತ್ತು ಇತರ ಸ್ಫೋಟಕ ವಸ್ತುಗಳನ್ನು ಖರೀದಿಸಿ ಬಾಂಬ್ ತಯಾರು ಮಾಡಿದ್ದರು ಎಂದು ತಿಳಿಸಲಾಗಿದೆ.
ಆರೋಪಿಗಳು ಇಸ್ಲಾಮಿಕ್ ಸ್ಟೇಟ್ ನ ಅಧಿಕೃತ ಮಾಧ್ಯಮ ವಾದ ಆಲ್ ಟೆಲಿಗ್ರಾಂ ಚಾನೆಲ್‌ನ ಸದಸ್ಯರಾಗಿದ್ದರು ಎಂದು ತಿಳಿಸಿದ್ದಾರೆ.