Wednesday, October 2, 2024
Wednesday, October 2, 2024

ಕೃಷಿ & ತೋಟಗಾರಿಕಾ ವಿವಿ ಘಟಿಕೋತ್ಸವಕ್ಕೆರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Date:

ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 10 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆ. 26 ರಂದು ಆಯೋಜಿಸಲಾಗಿದೆ ಎಂದು ವಿವಿ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ತಿಳಿಸಿದರು.

 ನವುಲೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು,  ಹತ್ತನೆಯ ಸಂಸ್ಥಾಪನಾ ದಿನಾಚರಣೆ  ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಸ್ವಾಮಿಗಳು ವಹಿಸುವರು. ಸಂಸದರಾದ ಬಿ.ವೈ.ರಾಘವೇಂದ್ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಹೆಚ್.ಹಾಲಪ್ಪ ಇವರು ಪಾಲ್ಗೊಂಡು ಪ್ರಶಸ್ತಿ ವಿತರಣೆ ಮಾಡುವರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಅಧ್ಯಕ್ಷತೆ ವಹಿಸುವರು. ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು ಮತ್ತು ಅಧಿಕಾರಿ ವರ್ಗದವರು ಭಾಗವಹಿಸುವರು.

  ಅಂದು ನಮ್ಮ ವಿಶ್ವವಿದ್ಯಾಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನೌಕರರನ್ನು ಗುರುತಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಸಂಶೋಧಕ ಪ್ರಶಸ್ತಿ, ಅತ್ಯುತ್ತಮ ವಿಸ್ತರಣಾ ವಿಜ್ಞಾನಿ ಪ್ರಶಸ್ತಿ, ಅತ್ಯುತ್ತಮ ಕ್ಷೇತ್ರ ಅಧೀಕ್ಷಕ ಪ್ರಶಸ್ತಿ, ಅತ್ಯುತ್ತಮ ಸೇವಾ ಸಿಬ್ಬಂದಿ ಪ್ರಶಸ್ತಿ (ಎ ಬಿ ಸಿ ಮತ್ತು ಡಿ), ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಬಾಹ್ಯ ಸಂಸ್ಥೆಗಳ ಅನುದಾನ ಪಡೆದವರಿಗೆ ಪ್ರಶಂಸನಾ ಪತ್ರ, ಅತ್ಯುತ್ತಮ ಸಂಶೋಧನಾ ಪ್ರಬಂಧ ರಚನೆ ಮಾಡಿದ ವಿಜ್ಞಾನಿಗಳಿಗೆ ಪ್ರಶಸ್ತಿ/ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.


 ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಏಳನೆಯ ಘಟಿಕೋತ್ಸವವನ್ನು ಸೆ. 28 ರಂದು ಬೆಳಿಗ್ಗೆ 11 ಗಂಟೆಗೆ  ಇರುವಕ್ಕಿ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್  ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ, ಪದವಿ ಪ್ರದಾನ  ಮಾಡಿ ಮಾತನಾಡುವರು ಎಂದರು.

ಕೃಷಿ ಸಚಿವ ಮತ್ತು ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಘಟಿಕೋತ್ಸವ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಟ್ರಸ್ಟ್ ಫಾರ್ ಅಡ್ವಾನ್ಸ್ಮೆಂಟ್ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಅಧ್ಯಕ್ಷರು ಮತ್ತು ಹರಿಯಾಣದ ರೈತರ ಆಯೋಗದ ಅಧ್ಯಕ್ಷ ಡಾ. ಆರ್. ಎಸ್. ಪರೋಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಏಳನೆಯ ಘಟಿಕೋತ್ಸವ ಭಾಷಣವನ್ನು ಮಾಡುವರು ಎಂದು ಮಾಹಿತಿ ನೀಡಿದರು.

ಸಮಾರಂಭದಲ್ಲಿ 355 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ, 79 ಎಂ.ಎಸ್ಸಿ ಪದವಿ, 10 ಪಿ ಎಚ್ ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಈ ಸಂದರ್ಭದಲ್ಲಿ 7 ಬಿ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು, 13 ಎಂ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು ಮತ್ತು 4 ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳು ಸೇರಿ ಒಟ್ಟಾರೆ 33 ಚಿನ್ನದ ಪದಕಗಳನ್ನು 24 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುತ್ತದೆ.

2020-21 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಐಸಿಎಆರ್-ಜೆಆರ್‌ಎಫ್ ಪರೀಕ್ಷೆಯಲ್ಲಿ ನಮ್ಮ ವಿವಿ ಯ ಒಟ್ಟು 14ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ. ಹಾಗೂ ಅಖಿಲ ಭಾರತ ಐಸಿಎಆರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ೨ ವಿದ್ಯಾರ್ಥಿಗಳು ಎಸ್‌ಆರ್‌ಎಫ್ ಗಳಾಗಿ ಆಯ್ಕೆಯಾಗಿದ್ದಾರೆ.

15 ವಿದ್ಯಾರ್ಥಿಗಳು ಎನ್‌ಟಿಎಸ್(ಸ್ನಾತಕೋತ್ತರ) ಪ್ರವೇಶ ಪಡೆದುಕೊಂಡಿದ್ದಾರೆ.
ಐಸಿಎಆರ್ ವತಿಯಿಂದ ಮಂಜೂರಾಗಿ ಅನುಷ್ಟಾನಗೊಂಡಿರುವ 3 ಅನುಭವ ಕಲಿಕೆ ಯೋಜನೆಗಳಾದ ಬೀಜೋತ್ಪಾದನೆ ತಂತ್ರಜ್ಞಾನ, ಜೈವಿಕ ಶಿಲೀಂದ್ರನಾಶಕಗಳು, ಪುಷ್ಪಕೃಷಿಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲಾಗಿದೆ. ವಿವಿಧ ಸ್ಪರ್ಧೆಗಳು, ಕ್ರೀಡಾಕೂಟದಲ್ಲಿ ನಮ್ಮ ವಿವಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಸುಮಾರು 525.63 ಲಕ್ಷ ಅನುದಾನ ದೊರೆತಿದ್ದು 32 ಯೋಜನೆಗಳು ಅನುಷ್ಟಾನಗೊಳ್ಳಲಿವೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಇರುವಕ್ಕಿಯಲ್ಲಿ ಅನಾನಸ್ ಹಾಗೂ ಇತರ ಹಣ್ಣುಗಳು ಮತ್ತು ಶುಂಠಿಯನ್ನು ಸಂಸ್ಕರಣೆ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ. ವಿಶ್ವವಿದ್ಯಾಲಯದ ಬೀಜ ಘಟಕದಿಂದ ಎಲ್ಲಾ ಸಂಶೋಧನಾ ಕೇಂದ್ರಗಳು ಮತ್ತು ಪ್ರಗತಿಪರ ರೈತರ ಕ್ಷೇತ್ರಗಳಲ್ಲಿ ಬೀಜೋತ್ಪಾದನೆ ಮತ್ತು ಸಸ್ಯೋತ್ಪಾದನೆ ಕಾರ್ಯಕ್ರಮಗಳ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.


ಶಿಲೀಂದ್ರ ರೋಗ ನಿಯಂತ್ರಣ, ಆದಾಯಕ್ಕೆ ಪೂರಕವಾದ ಅಡಿಕೆ ಪರ್ಯಾಯ ಬೆಳೆ ಪದ್ದತಿ ಸೇರಿದಂತೆ ಅನೇಕ ಪ್ರಯೋಗ ಮತ್ತು ಸಂಶೋಧನೆಗಳ ಮುಖಾಂತರ ಕೃಷಿಕರ ಬದುಕನ್ನು ಹಸನುಗೊಳಿಸುವಂತಹ ಹಾಗೂ ಅದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಹಾಗೂ ತಂತ್ರಜ್ಞಾನ ಅಭಿವೃದ್ದಿಪಡಿಸಿ ಕೃಷಿಕರ ಸರ್ವತೋಮುಖ ಅಭಿವೃದ್ದಿಗಾಗಿ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ವಿವಿ ಕುಲಸಚಿವರಾದ ಡಾ.ಲೋಕೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...