ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದೆ.
ಅದೇನು ಅಂದ್ರೆ, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದಾರೆ.
ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ಮಾಹಿತಿ ತಿಳಿಸಿವೆ.
ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ, ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.