ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಗ್ರಾಮಪಂಚಾಯಿತಿ ನೌಕರರಿಗೆ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ವಿಧಾನಪರಿಷತ್ನಲ್ಲಿ ಅವರು ಕೇಳಿದ ಚುಕ್ಕಿ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದ್ದಾರೆ. ಅದರ ಅನ್ವಯ ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿದೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಾರಿಗೆ ಸಚಿವರು ವೇತನ ಪರಿಷ್ಕರಣೆಗೆ ಒಪ್ಪಿದ್ದಾರೆ ಎಂದು ಡಿ.ಎಸ್. ಅರುಣ್ ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸರ್ಕಾರ ಗ್ರಾಮಪಂಚಾಯಿತಿ ನೌಕರರ 16 ತಿಂಗಳ ವೇತನ ಬಾಕಿಯನ್ನು ಬಿಡುಗಡೆ ಮಾಡಬೇಕು ಎಂದು ಪ್ರಶ್ನಿಸಿದ್ದೆ. ಈ ಹಿನ್ನೆಲೆಯಲ್ಲಿ ಸರ್ಕಾರ 16 ತಿಂಗಳ ವೇತನ ಬಾಕಿ 7.31 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.