Tuesday, February 3, 2026
Tuesday, February 3, 2026

ಹಿರಿಯರನ್ನ ಗೌರವಿಸಿ ಸೌಹಾರ್ದವಾಗಿ ನಡೆದುಕೊಳ್ಳಿ- ನ್ಯಾ.ರಾಜಣ್ಣ ಸಂಕಣ್ಣವರ್

Date:

ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ಕಾನೂನು ಅರಿವು ಕಾರ್ಯಕ್ರಮ, ಹಿರಿಯ ನಾಗರಿಕರ ದಿನಾಚರಣೆ ಯು ದಿನಾಂಕ 1-10-2022 ರಂದು ಶನಿವಾರ ಬೆಳಿಗ್ಗೆ ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆಯಿತು. ಶ್ರಮದಾನ ವನ್ನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಬಸಮ್ಮ ಉದ್ಘಾಟಿಸಿದರು.

ಕಾನೂನು ಜಾಗೃತಿ ಮತ್ತು ಹಿರಿಯ ನಾಗರೀಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಯುತ ರಾಜಣ್ಣ ಸಂಕಣ್ಣವರ್ ರವರು ಮಾತನಾಡಿ ಹಿರಿಯರನ್ನು ಗೌರವಿಸುವ ಜತೆಗೆ ಅವರ ಜೊತೆ ಸೌಹಾರ್ದ ರೀತಿಯಿಂದ ನಡೆದು ಕೊಳ್ಳ ಬೇಕಾದ್ದು ಎಲ್ಲರ ಕರ್ತವ್ಯ ಎಂದು ತಿಳಿಸಿದರು. ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ನ ನಿರ್ದೇಶಕರಾದ ಕೆ.ಸಿ.ಬಸವರಾಜ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಂಚಾಯತ್ ಉಪಾಧ್ಯಕ್ಷೆ, ಪಂಚಾಯತ್ ಅಭಿರುದ್ದಿ ಅಧಿಕಾರಿ ಪರಮೇಶ್ವರ್ ರವರು ಹಿರಿಯ ನಾಗರೀಕರ ಸಂರಕ್ಷಣೆ ಹಾಗೂ ಸ್ವಚತೆ ಬಗೆಗೆ ಪ್ರಮಾಣ ವಚನ ಭೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಅಬ್ಬಲಗೆರೆ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು , ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಮತ್ತು ಎನ್. ವೈ. ಕೆ. ಸ್ವಯಂ ಸೇವಕರು , ಗ್ರಾಮದಲ್ಲಿ ಸ್ವಚತಾ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...