ಹಿಂದೂ ಧರ್ಮದ ರಕ್ಷಣೆಯೊಂದಿಗೆ ದಲಿತದ ಹಿತ ರಕ್ಷಣೆಯ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮತಾಂತರ ಆಗುವವರಿಗೆ ಮೀಸಲಾತಿ ಸಿಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಹಿಂದೂ ಜಾಗೃತ ಸಮಿತಿ ಹಮ್ಮಿಕೊಂಡಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಹಲವು ವರ್ಷಗಳಿಂದ ಬೇಡಿಕೆ ಇತ್ತು.
ಹಾಲಿ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಕಾಯ್ದೆಯನ್ನು ಜಾರಿಗೆ ತರುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.
ಸರ್ಕಾರಿ ಕೆಲಸದಲ್ಲಿರುವ ನೌಕರರಿಂದ ಹಿಡಿದು ಸಾಮಾನ್ಯ ದಲಿತರು ಮತಾಂತರ ಆದಲ್ಲಿ ಮೀಸಲಾತಿ ಅವರಿಗೆ ಸಿಗುವುದಿಲ್ಲ ಎಂದು ತಿಳಿಸಿದರು.