ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 18 ಆಗಿದೆ.
ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದ ಮತ್ತು ಮಿಕ್ಕುಳಿದ ವೃಂದದಲ್ಲಿನ ಹುದ್ದೆಗಳು ಇವಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ವಿಶ್ವವಿದ್ಯಾಲಯದ ಹೆಸರು: ದಾವಣಗೆರೆ ವಿಶ್ವವಿದ್ಯಾಲಯ
ಹುದ್ದೆಯ ಹೆಸರು:
ಬೋಧಕೇತರ
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ದಾವಣಗೆರೆ
ವೇತನ: 30350-97100 ರೂ.
ಸಹಾಯಕ ರಿಜಿಸ್ಟ್ರಾರ್
2
ಸ್ನಾತಕೋತ್ತರ ಪದವಿ
52650- 97100 ರೂ ಮಾಸಿಕ
ಕಚೇರಿ ಅಧೀಕ್ಷಕರು
2
ಪದವಿ
43100-83900 ರೂ ಮಾಸಿಕ
ಪ್ರಥಮ ದರ್ಜೆ ಸಹಾಯಕ (FDA)
6
ಪದವಿ
30350-58250 ರೂ ಮಾಸಿಕ
ವಯೋಮಿತಿ: ದಾವಣಗೆರೆ ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಇದನ್ನು : ಅಮೆಜಾನ್-ಫ್ಲಿಪ್ ಕಾರ್ಟ್ನಲ್ಲಿ ಬೃಹತ್ ನೇಮಕಾತಿ; 30000 ಹುದ್ದೆ ಭರ್ತಿಗೆ ಕ್ರಮ
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ ವಿಳಾಸ
ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಅಕ್ಟೋಬರ್ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: davangereuniversity.ac.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್ಲೋಡ್ ಮಾಡಿ
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ