ರಾಜ್ಯ ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿಯಾಗಿದೆ.
ಸಿಬ್ಬಂದಿಗೆ ಸಂಸ್ಥೆ ಸಂಬಳ ಪಾವತಿಸಬೇಕು. ಈ ಬಗ್ಗೆ ಚರ್ಚಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
108 ಆಂಬುಲೆನ್ಸ್ ಸಿಬ್ಬಂದಿ ಜೊತೆ ನಾವು ಮಾತನಾಡಿದ್ದೇವೆ. ಸರ್ಕಾರದ ಪರ ಜಿವಿಕೆ ಸಂಸ್ಥೆ ಆಂಬುಲೆನ್ಸ್ ಸೇವೆ ಒದಗಿಸುತ್ತಿದೆ. ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕೋರ್ಟ್ ಆದೇಶದಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. 2008ರಿಂದ ಜಿವಿಕೆ ಸಂಸ್ಥೆ 108 ಸೇವೆಯನ್ನು ಒದಗಿಸುತ್ತಿದೆ. ಜಿವಿಕೆ ಸಂಸ್ಥೆಯ ಸೇವೆ ಸಹ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಉತ್ಕೃಷ್ಟ ಸೇವೆ ಒದಗಿಸಲು ಹೊಸ ಟೆಂಡರ್ ಆಹ್ವಾನಿಸಿದ್ದೇವೆ. ಮುಂದಿನ ಎರಡು ತಿಂಗಳಲ್ಲೇ ಟೆಂಡರ್ ಅಂತಿಮ ಮಾಡುತ್ತೇವೆ. ಬೈಕ್ ಆಂಬುಲೆನ್ಸ್ ಸೇವೆ ಅನಗತ್ಯವೆಂದು ಸಮಿತಿ ವರದಿನೀಡಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.