Saturday, October 10, 2026
Saturday, October 10, 2026

ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ-ಮಿಥುನ್ ಕುಮಾರ್

Date:

ಶಿವಮೊಗ್ಗದ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ ಪಿ ಬಿ. ಎಂ.ಲಕ್ಷ್ಮೀ ಪ್ರಸಾದ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ನೂತನ ಎಸ್ ಪಿ ಜಿ .ಕೆ. ಮಿಥುನ್ ಕುಮಾರ್ ಅವರು, ಶಿವಮೊಗ್ಗ ಜಿಲ್ಲೆ ಐತಿಹಾಸಿಕವಾಗಿ ಹೆಸರುವಾಸಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿರುವ ಜಿಲ್ಲೆಗಳಲ್ಲಿ ಶಿವಮೊಗ್ಗ ಸಹ ಒಂದಾಗಿದೆ. ಇಲ್ಲಿನ ಜನರು ಸಾಕಷ್ಟು ಬುದ್ಧಿವಂತರು, ಸೃಜನಶೀಲರು. ಇಲ್ಲಿ ಕಾರ್ಯನಿರ್ವಹಿಸಲು ನಾಗರಿಕರು ಹಾಗೂ ಮಾಧ್ಯಮದವರ ಸಹಕಾರ ಅಗತ್ಯ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳಿಗೆ ಯಾವುದೇ ರೀತಿಯ ಅವಕಾಶ ನೀಡುವುದಿಲ್ಲ. ಜೊತೆಗೆ ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳಿಗೆ ತಕ್ಷಣ ಪರಿಹಾರ ಒದಗಿಸಲು ನೂರಕ್ಕೆ ನೂರರಷ್ಟು ಶ್ರಮಪಡುವುದಾಗಿ ಎಸ್ ಪಿ ಜಿ.ಕೆ. ಮಿಥುನ್ ಕುಮಾರ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...