ವಿಧಾನಸೌಧದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು. ಸಭೆ ನಂತರ ಮಾತನಾಡಿರುವ ಸಚಿವ ಆರ್.ಅಶೋಕ್ ಮಲೆನಾಡು ಭಾಗದ ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟ ಜಮೀನುಗಳನ್ನು ರೈತರಿಗೆ ನೀಡಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವರುಈ ಜಮೀನುಗಳನ್ನು ಅರಣ್ಯ ಭೂಮಿ ಎಂದು ಘೋಷಣೆ ಆಗಿದೆ. ಆದರೆ 60 ರಿಂದ 70 ವರ್ಷಗಳಿಂದ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈ ಜಮೀನುಗಳಲ್ಲಿ ತೆಂಗು, ಅಡಿಕೆ ಬೆಳೆಯುತ್ತಿದ್ದಾರೆ. ಆದ್ದರಿಂದ, ಈಥರದ ಜಮೀನುಗಳನ್ನು ಕಾನೂನು ತಿದ್ದುಪಡಿ ಮಾಡಿ ರೈತರಿಗೆ ಕೊಡಬೇಕು ಎಂದು ನಿರ್ಧಾರ ಮಾಡಿದ್ದೀವಿ.
ಜಮೀನುಗಳನ್ನು ಅರಣ್ಯ ಭೂಮಿ ಮಾಡಲು ಈಗ ಆಗಲ್ಲ. ಆದ್ದರಿಂದ, ಬಡ ರೈತರಿಗೆ ಕೊಡಲು ತೀರ್ಮಾನ ಮಾಡಿದ್ದೇವೆ. ಈ ಸಂಬಂಧ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಆದಷ್ಟು ಬೇಗ ಈ ನಿಟ್ಟಿನಲ್ಲಿ ಸರ್ಕಾರಿಂದ ಆದೇಶ ಮಾಡಲಾಗುತ್ತದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.