Sunday, June 7, 2026
Sunday, June 7, 2026

ಕಡಿಮೆ ಬೆಲೆಗೆ ಗೃಹಬಳಕೆ ಸಿಲಿಂಡರ್ ಮಾರಾಟ ನಷ್ಟಗೊಂಡ ಕಂಪನಿಗಳಿಗೆ ನೆರವು

Date:

ಕಳೆದ ಎರಡು ವರ್ಷಗಳಲ್ಲಿ ಗೃಹಬಳಕೆಯ ಅಡುಗೆ ಅನಿಲವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದರಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ಸರ್ಕಾರಿ ಸ್ವಾಮ್ಯದ ಮೂರು ಇಂಧನ ಚಿಲ್ಲರೆ ಮಾರಾಟ ಕಂಪನಿಗಳಿಗೆ ಒಂದು ಬಾರಿ ₹22,000 ಕೋಟಿ ಪರಿಹಾರ ಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಎಂದು ಹೇಳಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಶನ್(ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಕಂಪನಿಗಳಿಗೆ ಒಂದು ಬಾರಿ ಪರಿಹಾರ ಧನ ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

ಜೂನ್ 2020 ಮತ್ತು ಜೂನ್ 2022ರ ನಡುವೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಎಲ್‌ಪಿಜಿ ಮಾರಾಟ ಮಾಡಿದ್ದರಿಂದ ಆದ ನಷ್ಟವನ್ನು ತೈಲ ಕಂಪನಿಗಳು ಈ ಸಹಾಯಧನದಿಂದ ಸರಿದೂಗಿಸಲಿವೆ.

ಜೂನ್ 2020 ಮತ್ತು ಜೂನ್ 2022ರ ನಡುವೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ದರ ಶೇಕಡ 300ರಷ್ಟು ಹೆಚ್ಚಾಗಿದೆ. ಆದರೆ, ಅಂತರರಾಷ್ಟ್ರೀಯ ಬೆಲೆ ವ್ಯತ್ಯಾಸದ ಭಾರವನ್ನು ಗ್ರಾಹಕರ ಮೇಲೆ ಸಂಪೂರ್ಣ ಹೇರದೆ ಶೇಕಡ 72ರಷ್ಟು ಬೆಲೆ ಏರಿಕೆ ಮಾತ್ರ ಮಾಡಲಾಗಿತ್ತು. ಹೀಗಾಗಿ, ಮೂರು ತೈಲ ಕಂಪನಿಗಳು ಗಮನಾರ್ಹ ನಷ್ಟ ಅನುಭವಿಸಿದ್ದವು ಎಂದು ತಿಳಿಸಲಾಗಿದೆ.ನಷ್ಟದ ನಡುವೆಯೂ ಈ ಮೂರು ತೈಲ ಕಂಪನಿಗಳು ದೇಶದ ಜನರಿಗೆ ಅಗತ್ಯವಾದ ಅಡುಗೆ ಅನಿಲ ಸರಬರಾಜನ್ನು ಮುಂದುವರಿಸಿದ್ದವು. ಬಳಿಕ, ಈ ಕಂಪನಿಗಳಿಗೆ ಒಂದು ಬಾರಿ ಸಹಾಯಧನ ಬಿಡುಗಡೆಗೆ ಸರ್ಕಾರ ನಿರ್ಧರಿಸಿತು’ಎಂದು ತಿಳಿಸಿದೆ.

ಈ ನಿರ್ಧಾರವು ಸರ್ಕಾರಿ ಒಡೆತನದ ತೈಲ ಕಂಪನಿಗಳು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ತಮ್ಮ ಬದ್ಧತೆಯನ್ನು ಮುಂದುವರಿಸಲು ಸಹಾಯ ಮಾಡುತ್ತದೆ.

ಅಡೆತಡೆ ಇಲ್ಲದ ದೇಶೀಯ ಎಲ್‌ಪಿಜಿ ಪೂರೈಕೆಗಳನ್ನು ಖಾತ್ರಿಪಡಿಸುತ್ತದೆ ಮತ್ತು ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಸಂಗ್ರಹಣೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...