ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ವಿಭಜಿತ ತೀರ್ಪಿಗೆ ಪ್ರತಿಕ್ರಿಯಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಮುಸ್ಲಿಂ ಹುಡುಗಿಯರ ಹಿಜಾಬ್ ಅನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗೋಲ್ಕೊಂಡಾ ಕೋಟೆಯಲ್ಲಿ ನಡೆದ ಸಭೆಯಲ್ಲಿ ಸಂವಾದದ ಸಂದರ್ಭದಲ್ಲಿ, ಹಿಜಾಬ್ ನಿಷೇಧದ ಕುರಿತು ಸುಪ್ರೀಂ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದ ಓವೈಸಿ, ಮುಸ್ಲಿಂ ಮಹಿಳೆಯರು ತಮ್ಮ ತಲೆಯನ್ನು ಮುಚ್ಚಲು ಬಯಸಿದರೆ, ಅವರು ತಮ್ಮ ಬುದ್ಧಿಯನ್ನು ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.
ಮುಸ್ಲಿಮರು ಚಿಕ್ಕ ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳುತ್ತಾರೆ. ನಾವು ನಿಜವಾಗಿಯೂ ನಮ್ಮ ಹುಡುಗಿಯರನ್ನು ಒತ್ತಾಯಿಸುತ್ತಿದ್ದೇವೆಯೇ ನಮ್ಮ ಹೆಣ್ಣುಮಕ್ಕಳು ಹಿಜಾಬ್ ಧರಿಸಲು ಬಿಡಿ. ನೀವು ಬಯಸಿದರೆ ನಿಮ್ಮ ಬಿಕಿನಿಯನ್ನು ಧರಿಸಿ ಎಂದು ಎಐಎಂಐಎಂ ನಾಯಕ ಕಿಡಿ ಕಾರಿದ್ದಾರೆ.
ಹಿಜಾಬ್ ಮುಸ್ಲಿಮರು ಹಿಂದುಳಿದಿರುವುದನ್ನು ತೋರಿಸುತ್ತದೆಯೇ ಮುಸ್ಲಿಂ ಮಹಿಳೆಯರು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲವೇ ಎಂದು ಪ್ರಶ್ನಿಸಿದರು.