Saturday, November 23, 2024
Saturday, November 23, 2024

ಕೆಪಿಎಸ್ ಸಿ ಯಿಂದ ಸಾಂಖ್ಯಿಕ ಇಲಾಖೆಯಲ್ಲಿನ ಹುದ್ದೆಗಳಿಗೆ ಆನ್ ಲೈನ್ ಅರ್ಜಿ

Date:

ಕರ್ನಾಟಕ ಲೋಕ ಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ ಮತ್ತು ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಉಳಿಕೆ ಮೂಲ ವೃಂದದ 55 + 03 (ಬ್ಯಾಕ್‌ಲಾಗ್‌) ಒಟ್ಟು ೫೮ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕದ 17 ಸಾಂಖ್ಯಿಕ ನಿರೀಕ್ಷಕರ ಹುದ್ದೆ, ಎಲ್ಲ ಸೇರಿಸಿ ಒಟ್ಟು 75 ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಲ್ಯಾಣ ಕರ್ನಾಟಕದ ಐದು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಕಳೆದ ಜುಲೈನಲ್ಲಿ ಅಧಿಸೂಚನೆ ಪ್ರಕಟಿಸಿರುವುದರಿಂದ ಈಗ ಈ ಹುದ್ದೆಗೆ ನೇಮಕ ನಡೆಯುತ್ತಿಲ್ಲ.
ಉಳಿಕೆ ಮೂಲ ವೃಂದದ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಮತ್ತು ಕಲ್ಯಾಣ ಕರ್ನಾಟಕದ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಪ್ರತ್ಯೇಕವಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗೆ ಅಕ್ಟೋಬರ್‌ 20 ರಿಂದ ನವೆಂಬರ್‌ 18 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್‌ 19 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ ಅಕ್ಟೋಬರ್‌ 17 ರಿಂದ ನವೆಂಬರ್‌ 15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್‌ 16 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗೆ Mathematics, Pure Mathematics, Statistics, Applied Statistics, Economics with Statistics / Quantitative Techniques, Pure Economics, Applied Economics, Applied Mathematics, Econometrics or Computer Science ಈ ವಿಷಯಗಳಲ್ಲಿ ಮಾಸ್ಟರ್‌ ಡಿಗ್ರಿ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ 1. Economics 2. Statistics 3.Mathematics 4. Computer Science ಈ ಯಾವುದಾದರೂ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಇತರೆ ಯಾವುದೇ ತತ್ಸಮಾನ ಎಂದು ಹೇಳಲಾಗುವ ವಿದ್ಯಾಹರ್ತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-10-2022 (ನಿರೀಕ್ಷಕರ ಹುದ್ದೆ ) 20-10-2022 (ಅಧಿಕಾರಿ ಹುದ್ದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2022 (ನಿರೀಕ್ಷಕರ ಹುದ್ದೆ) 18-11-2022 (ಅಧಿಕಾರಿ ಹುದ್ದೆ)
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 16-11-2022 (ನಿರೀಕ್ಷಕರ ಹುದ್ದೆ) 19-11-2022 (ಅಧಿಕಾರಿ ಹುದ್ದೆ)
ಸಹಾಯವಾಣಿ ಸಂಖ್ಯೆ: 18005728707
ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50 ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees) 35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ.

ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.
ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ.

ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ.

ಆದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ.

ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...