ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಲ್ಲಿ 454 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಲಾಗಿದ್ದು, 1137 ಹುದ್ದೆಗಳು ಸಾಮಾನ್ಯ ಹುದ್ದೆಗಳಾಗಿವೆ.
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು ಮೀರಿರಬಾರದು. ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅ.20 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು. ಅರ್ಜಿ ಸಲ್ಲಿಸಲು 21 ನವೆಂಬರ್ ಕೊನೆಯ ದಿನಾಂಕವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ