ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್ನ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ.
ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಇಂದು (ನ. 14) ಬೆಳಿಗ್ಗೆ ಕೆಎಂಎಫ್ ಹಾಲಿನ ಮತ್ತು ಮೊಸರಿನ ದರವನ್ನು 3ರೂ ಗೆ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಕಲಬುರಗಿಯ ಸೇಡಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಲಿನ ದರ ಏರಿಕೆ ಇಲ್ಲ, ನ.20ರ ನಂತರ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದರು.