ಅಚ್ಚುಕಟ್ಟು ಪ್ರದೇಶದ ಅಡಿಕೆ- ತೆಂಗಿನ ತೋಟಗಳ ಹಿತದೃಷ್ಟಿಯಿಂದ ಈ ಬಾರಿ ಬೇಸಿಗೆ ಹಂಗಾಮಿನಲ್ಲಿ ವಾಡಿಕೆಗಿಂತ ಒಂದು ವಾರ ಮೊದಲೇ ನಾಲೆಗಳಿಗೆ ನೀರು ಹರಿಸಲು ಶಿವಮೊಗ್ಗದಲ್ಲಿ ಬುಧವಾರ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 82ನೇ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತ ಮುಖಂಡರು, ಕಾಡಾ ನಿರ್ದೇಶಕರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಎಲ್ಲರ ಸಲಹೆ ಪಡೆದು ಈ ತೀರ್ಮಾನ ಕೈಗೊಳ್ಳಲಾಯಿತು.
ಇತಿಹಾಸದಲ್ಲೇ ಮೊದಲು: ‘ಪ್ರತಿ ವರ್ಷ ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಹರಿಸುತ್ತಿದ್ದ ನೀರನ್ನು ನ. 20ಕ್ಕೆ ಬಂದ್ ಮಾಡಿ, ಬೇಸಿಗೆ ಬೆಳೆಗೆ ಜ. 1ರಿಂದ ನೀರು ಕೊಡಲಾಗುತ್ತಿತ್ತು. ಆದರೆ, ಈ ವರ್ಷ ಐದು ದಿನ ತಡವಾಗಿ (ನ. 25) ನೀರು ನಿಲ್ಲಿಸಲಾಗುತ್ತಿದೆ. ಡಿ. 25ಕ್ಕೆ ಮತ್ತೆ ನೀರು ಹರಿಸಲಾಗುತ್ತಿದೆ. ಈ ಮೊದಲು ಒಂದೂವರೆ ತಿಂಗಳು ಕಾಲುವೆಯಲ್ಲಿ ನೀರು ಇರುತ್ತಿರಲಿಲ್ಲ. ಅದನ್ನು ಈಗ ಒಂದು ತಿಂಗಳಿಗೆ ಇಳಿಸಲಾಗಿದೆ. ನಮ್ಮಲ್ಲಿ ನೀರಿನ ಸಂಗ್ರಹ ಇರುವುದರಿಂದ ಜಲಾಶಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹೆಚ್ಚು ದಿನಗಳ ಕಾಲ ನೀರು ಹರಿಸುವ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಪವಿತ್ರಾ ರಾಮಯ್ಯ ಹೇಳಿದರು.
ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತ ಮುಖಂಡರು, ಕಾಡಾ ನಿರ್ದೇಶಕರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಎಲ್ಲರ ಸಲಹೆ ಪಡೆದು ಈ ತೀರ್ಮಾನ ಕೈಗೊಳ್ಳಲಾಯಿತು.
ಪ್ರತಿ ವರ್ಷ ಮಳೆಗಾಲದಲ್ಲಿ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಹರಿಸುತ್ತಿದ್ದ ನೀರನ್ನು ನ. 20ಕ್ಕೆ ಬಂದ್ ಮಾಡಿ, ಬೇಸಿಗೆ ಬೆಳೆಗೆ ಜ. 1ರಿಂದ ನೀರು ಕೊಡಲಾಗುತ್ತಿತ್ತು. ಆದರೆ, ಈ ವರ್ಷ ಐದು ದಿನ ತಡವಾಗಿ ನೀರು ನಿಲ್ಲಿಸಲಾಗುತ್ತಿದೆ. ಡಿ. 25ಕ್ಕೆ ಮತ್ತೆ ನೀರು ಹರಿಸಲಾಗುತ್ತಿದೆ. ಈ ಮೊದಲು ಒಂದೂವರೆ ತಿಂಗಳು ಕಾಲುವೆಯಲ್ಲಿ ನೀರು ಇರುತ್ತಿರಲಿಲ್ಲ. ಅದನ್ನು ಈಗ ಒಂದು ತಿಂಗಳಿಗೆ ಇಳಿಸಲಾಗಿದೆ. ನಮ್ಮಲ್ಲಿ ನೀರಿನ ಸಂಗ್ರಹ ಇರುವುದರಿಂದ ಜಲಾಶಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹೆಚ್ಚು ದಿನಗಳ ಕಾಲ ನೀರು ಹರಿಸುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಪವಿತ್ರಾ ರಾಮಯ್ಯ ಹೇಳಿದರು.
ಭದ್ರಾ ಜಲಾಶಯದಿಂದ ನೀರು ಹರಿಯುವ ಎಡದಂಡೆ ನಾಲೆ, ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಯ ಮೂಲಕ ಅಚ್ಚುಕಟ್ಟು ಭಾಗಗಳ ರೈತರು ಇದರ ಲಾಭ ಪಡೆಯಲಿದ್ದಾರೆ.
ಭದ್ರಾ ಅಚ್ಚುಕಟ್ಟು ಪ್ರದೇಶ ಭಿನ್ನ ಹವಾಮಾನ ಮತ್ತು ಮಣ್ಣಿನ ಗುಣ ಹೊಂದಿದೆ. ಭದ್ರಾವತಿ ಸುತ್ತಲಿನ ಪ್ರದೇಶದಲ್ಲಿ ಕಲ್ಲುಭೂಮಿ, ಕೆಂಪುಮಿಶ್ರಿತ ಮಣ್ಣಿನಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಈ ಮಣ್ಣು 20ರಿಂದ 25 ದಿನಕ್ಕೆ ಮಾತ್ರ ನೀರನ್ನು ಹಿಡಿದಿಡುತ್ತದೆ. ದಾವಣಗೆರೆ, ಮಲೆಬೆನ್ನೂರು, ಹರಿಹರ ಭಾಗದಲ್ಲಿ ಎರೆಮಣ್ಣಿದ್ದು ಒಂದು ತಿಂಗಳವರೆಗೆ ನೀರನ್ನು ತಡೆದಿಡುವ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಆ ಭಾಗಕ್ಕೆ ಸ್ವಲ್ವ ತಡವಾಗಿ ನೀರು ಹರಿಸಬೇಕು ಎಂದು ರೈತರು ಸಭೆಯಲ್ಲಿ ಅಭಿಪ್ರಾಯ ಹಂಚಿಕೊಂಡರು.
ನೀರಾವರಿ ಸಲಹಾ ಸಮಿತಿಯ ಸದಸ್ಯರು, ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ರೈತ ಮುಖಂಡರು ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರು ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ರೈತರು ಮತ್ತು ಭದ್ರಾ ಕಾಡಾ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.