ಬಿಜೆಪಿಗೆ ಜೆಡಿಎಸ್ ಮುಖಂಡ ಹೆಚ್.ಟಿ. ಬಳಿಗಾರ್ ಅವರು ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಳಿಗಾರ್ ಅವರಿಗೆ ಕೇಸರಿ ಶಾಲು ಹೊದಿಸುವುದರ ಮುಖಾಂತರ ಪಕ್ಷಕ್ಕೆ ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಅವರು ಬರ ಮಾಡಿಕೊಂಡಿದ್ದಾರೆ.
ಹೆಚ್.ಟಿ. ಬಳಿಗಾರ್ ಅವರು ಶಿಕಾರಿಪುರ ಭಾಗದಲ್ಲಿ ಪ್ರಭಾವಿ ಮುಖಂಡರಾಗಿದ್ದಾರೆ.
ಶಿವಮೊಗ್ಗದಲ್ಲಿ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಬಳಿಗಾರ್ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ಮತ್ತಷ್ಟು ಬಲ ಬಂದಂತಾಗಿದೆ ಎಂದು ಹೇಳಿದರು.
ವಾಲ್ಮೀಕಿ ಸಮಾಜದ ಹಿರಿಯ ಮುಖಂಡರಾಗಿರುವ ಇವರು ಕೆ.ಎ.ಎಸ್. ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಿಂದಿನ ರಾಜ್ಯ ಸರ್ಕಾರದಲ್ಲಿ ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅನುಭವ ಅವರಿಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಇವರಿಗೆ ಹಲವಾರು ವರ್ಷಗಳ ಹಿಂದೆಯೇ ಬಿಜೆಪಿಗೆ ಆಹ್ವಾನಿಸಿದ್ದೆವು. ಈಗ ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದಾರೆ.ಇವರಿಗೆ ಸೂಕ್ತ ಸ್ಥಾನಮಾನ ನೀಡಲು ನಾವು ಬದ್ಧರಾಗಿದ್ದೆವೆ.ಇವರನ್ನು ಬಳಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ಪಕ್ಷದ ಮುಖಂಡರು ಉಪಸ್ಥತರಿದ್ದರು.