Monday, February 2, 2026
Monday, February 2, 2026

ಜೆಡಿಎಸ್ ಅಧಿಕಾರಕ್ಕೆಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ- ಕುಮಾರಸ್ವಾಮಿ

Date:

ಜೆಡಿಎಸ್​ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭಾನುವಾರ ಜೆಡಿಎಸ್ನ ಪಂಚರತ್ನ ರಥಯಾತ್ರೆ ತಲುಪಿತು.

ರಥಯಾತ್ರೆಯ ದಾರಿಯುದ್ದಕ್ಕೆ ಎಚ್ಡಿಕೆ ಅವರ ಬಳಿ ರೈತ ಮಹಿಳೆಯರು, ಸ್ತ್ರೀ ಸಂಘಗಳ ಸದಸ್ಯರು ಸಾಲ ಮನ್ನ ಮಾಡುವಂತೆ ಕಷ್ಟ ಹೇಳಿಕೊಂಡಿದ್ದರು.

ಮಾಸ್ತಿ ಗ್ರಾಮದಲ್ಲಿ ಮಾತನಾಡಿದ ಎಚ್ಡಿಕೆ, 2018ರಲ್ಲಿ ಜೆಡಿಎಸ್ಗೆ ಬಹುಮತ ಸಿಕ್ಕಿ ಸರ್ಕಾರ ರಚಿಸಿದ್ದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡುವ ಉದ್ದೇಶವಿತ್ತು. ಆಗ ಮೈತ್ರಿ ಸರ್ಕಾರದಲ್ಲಿ ರೈತರ 25 ಸಾವಿರ ಕೋಟಿ ರೂ. ಮನ್ನಾ ಮಾಡಿದ್ದೆವು. ಅದಾದ ಬಳಿಕ ಸ್ತ್ರೀಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ತೀರ್ಮಾನಿಸಿದ್ದೆ. ಅಷ್ಟರಲ್ಲಿ ಸರ್ಕಾರವನ್ನು ಕೆಡವಿದ್ದರಿಂದ ಸಾಲಮನ್ನಾ ಮಾಡಲಾಗಲಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಘೋಷಿಸಿದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮಾಲೂರು ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ 220 ಕೋಟಿ ರೂ. ಅನುದಾನ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...