2022-23ನೇ ಸಾಲಿಗೆ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡೋದಕ್ಕಾಗಿ, ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರ ಪ್ರತಿ ಕನ್ನಡ ನ್ಯೂಸ್ ನೌಗೆ ದೊರೆತಿದ್ದು, 2022-23ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಎಸ್ ಎಸ್ ಎಲ್ ಸಿಯಿಂದ ಸ್ನಾತಕೋತ್ತರದವರೆಗೆ ಅತಿ ಹೆಚ್ಚು ಅಂಕ ಪಡೆದ ಶಿಕ್ಷಕರುಗಳ, ಉಪನ್ಯಾಸಕರು, ಪ್ರಾಂಶುಪಾಲರುಗಳ, ನಿವೃತ್ತ ಶಿಕ್ಷಕರು, ನಿವೃತ್ತ ಉಪನ್ಯಾಸಕರು, ಪ್ರಾಂಶುಪಾಲರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ.
ಈ ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕಾಗಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದಂತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಬಿಎ, ಬಿಎಸ್ಸಿ, ಬಿಕಾಂ, ಬಿ.ಇಡಿ, ಬಿಸಿಎ, ಬಿಬಿಎಂ, ಬಿಎಸ್ ಸಿಎಜಿ, ಬಿಹೆಚ್ ಎಂ, ಎಲ್ ಎಲ್ ಬಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳು, ಪ್ರಸ್ತುತ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಂದಹಾಗೇ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ಯಿಂದ, ಸ್ನಾತಕ ಪದವಿ ವರೆಗಿನ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದರ ಹೊರತಾಗಿ ಸಿಬಿಎಸ್ಸಿ, ಐಸಿಎಸ್ಸಿ ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳು ಅರ್ಜಿಸಲ್ಲಿಸಲು ಅವಕಾಶ ಇರುವುದಿಲ್ಲ.
ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳು, ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅಂಕ ಪಟ್ಟಿಯೊಂದಿಗೆ www.kstbfonline.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವೆಬ್ ಸೈಟ್ ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-01-2023 ಆಗಿರುತ್ತದೆ. ಅಂತಿಮ ದಿನಾಂಕದ ನಂತ್ರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.