Sunday, August 23, 2026
Sunday, August 23, 2026

ಡಿ1 ರಿಂದ ಸುಶಾಸನ ಮಾಸಾಚರಣೆ-ಸಚಿವ ಅಶ್ವತ್ಥನಾರಾಯಣ

Date:

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ಸುಶಾಸನ ಮಾಸವನ್ನು ಆಚರಿಸಲಾಗುತ್ತದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಈ ಸಂಬಂಧವಾಗಿ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳನ್ನು ಕುರಿತು ಚರ್ಚಿಸಲು ಅವರು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಮಹತ್ತ್ವದ ಸಭೆ ನಡೆಸಿದರು.

ನಂತರ ಮಾತನಾಡಿದ ಅವರು, ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು‌ ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದರು.

ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ‌ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ‌ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...