ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂ.
ಮಂಜೂರು ಮಾಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಡಿಕೆಗೆ ಆರ್ಥಿಕ ಇಲಾಖೆಯೂ, ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ತೂದೂರು,ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂ. ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಹೊಸನಗರ ತಾಲೂಕಿನ ಕಾರಣಗಿರಿ-ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. 2 ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಬಳಿಯ ತುಂಬ್ರಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ.
ಕೊರೋನಾ ಲಾಕ್ ಡೌನ್ ಮತ್ತು ಮಳೆಗಾಲದ ಕ್ಲಿಷ್ಟಕರ ಸನ್ನಿವೇಶದಲ್ಲಿ, ಅನೇಕ ಅಡೆತಡೆ ಹಾಗೂ ಕಠಿಣ ಸವಾಲು ಎದುರಿಸಿ ಕೇವಲ ಎರಡೇ ತಿಂಗಳಿನಲ್ಲಿ ಸೇತುವೆ ನಿರ್ಮಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಹಿತಿ ತಿಳಿಸಿದ್ದಾರೆ.