Friday, November 22, 2024
Friday, November 22, 2024

ಸಿಇಟಿ ಅರ್ಜಿ ತುಂಬಲು ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಸಹಾಯ ಕೇಂದ್ರ

Date:

ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿ ಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಸಂಬಂಧವಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಜತೆ ಸಚಿವರು ಮಹತ್ವದ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಅಶ್ವತ್ಥ್​ ನಾರಾಯಣ ಅವರು, ಎಸ್ಸೆಸ್ಸೆಲ್ಸಿ‌ ಹಂತದಲ್ಲಿನ ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಜತೆ ಸಂಯೋಜನೆಗೊಳಿಸುವ ಸಂಬಂಧ ಚರ್ಚಿಸಲಾಯಿತು.

ಕೆಇಎ ಕೂಡ ಯಾವ ರೀತಿಯ ಮಾಹಿತಿ ಅಗತ್ಯ ಇದೆ ಎನ್ನುವುದನ್ನು ತಿಳಿಸಲಿದ್ದಾರೆ. ಎರಡೂ ಇಲಾಖೆಗಳ ಸಮನ್ವಯದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

ಈಗ ಸಾಕಷ್ಟು ವಿದ್ಯಾರ್ಥಿಗಳು ಸಿಇಟಿ ಅರ್ಜಿಯಲ್ಲಿ ಆರ್.ಡಿ. ಸಂಖ್ಯೆ, ತಂದೆಯ ಹೆಸರು, ಜಾತಿಯ ಹೆಸರು ಇತ್ಯಾದಿಗಳನ್ನು ತಪ್ಪಾಗಿ ದಾಖಲಿಸುತ್ತಿದ್ದಾರೆ.

ಇದನ್ನೆಲ್ಲ ಸರಿಪಡಿಸಲು ಏಳೆಂಟು ಬಾರಿ ಅವಕಾಶ ಕೊಡುತ್ತಿದ್ದು, ಇದರಿಂದ ಸಮಯ ವ್ಯರ್ಥವಾಗುತ್ತಿರುವುದರ ಜತೆಗೆ ಉಳಿದ ಪ್ರಕ್ರಿಯೆಗಳು ವಿಳಂಬ ಆಗುತ್ತಿವೆ. ಹೀಗಾಗಿ ಪಿಯುಸಿಯಲ್ಲಿ ಇರುವಾಗಲೇ ಸಿಇಟಿ ಅರ್ಜಿ ತುಂಬಲು ಕಲಿಸುವ ವಿದ್ಯಾರ್ಥಿಸ್ನೇಹಿ ವ್ಯವಸ್ಥೆ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದಕ್ಕಾಗಿ ಪ್ರತಿ ಕಾಲೇಜಿನಲ್ಲೂ ತಲಾ 100 ವಿದ್ಯಾರ್ಥಿಗಳಿಗೆ ಒಬ್ಬ ಪುರುಷ ಮತ್ತು ಓರ್ವ ಮಹಿಳಾ ಉಪನ್ಯಾಸಕರನ್ನ ಸಂಯೋಜಕರನ್ನಾಗಿ ನೇಮಿಸಲಾಗುವುದು.

ಇದರ ಜತೆಗೆ ಒಂದು ಜಿಲ್ಲೆಗೆ ತಲಾ ನಾಲ್ವರು ಮಾಸ್ಟರ್ ಟ್ರೈನರ್ ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಸಂಯೋಜಕರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತರಬೇತಿ ಕೊಡಲಾಗುವುದು. ಹಾಗೆಯೇ ಮಾಸ್ಟರ್ ಟ್ರೈನರ್ ಗಳಿಗೆ ಪ್ರಾಧಿಕಾರದಿಂದ ಪ್ರತ್ಯೇಕವಾಗಿ ತರಬೇತಿ ನೀಡಲಾಗುವುದು ಎಂದು ಅವರು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...