ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನೆಹರು ಯುವ ಕೇಂದ್ರ, ಶಿವಮೊಗ್ಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗೌಡರವರು ನೆರವೇರಿಸಿದರು.
ಅಧ್ಯಕ್ಷತೆಯನ್ನು ಸನ್ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಡಾ. ನಾಗೇಂದ್ರ ಎಫ್.ಹೊನ್ನಳ್ಳಿರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಜಣ್ಣ ಸಂಕಣ್ಣನವರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಡಿವೈಎಸ್ಪಿ ಬಾಲರಾಜ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಫ್ರೊ. ಸದಾನಂದ ರವರು ಸಂವಿಧಾನದ ರಚನೆ ಹಾಗೂ ಮೂಲಭೂತ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಸ್ವಾಗತವನ್ನು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ್ ಪರಿಸರ ನೆರವೇರಿಸಿ, ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್.ರವರು ವಂದಿಸಿದರು.
ಶಾರದಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು.
ನೆಹರೂ ಯುವ ಕೇಂದ್ರದ ಯುವ ಅಧಿಕಾರಿಗಳಾದ ಶ್ರೀ ಉಲ್ಲಾಸ್ ಕೆ.ಟಿ.ಕೆ., ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.