Tuesday, February 3, 2026
Tuesday, February 3, 2026

ಆರ್ಥಿಕ ಸ್ಥಿತಿ ಪರಿಗಣಿಸಿ ಮೀಸಲಾತಿ ಕಲ್ಪಿಸಿ- ಕುಮಾರಸ್ವಾಮಿ

Date:

ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬದಲಿಗೆ ಆಯಾ ಸಮಾಜಗಳ ಆರ್ಥಿಕ ಪರಿಸ್ಥಿತಿ ಆಧರಿಸಿ ಮೀಸಲಾತಿ ಕಲ್ಪಿಸುವ ಮೂಲಕ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲೆಡೆ ಮೀಸಲಾತಿ ನೀಡಬೇಕೆಂದು ವಿವಿಧ ಸಮಾಜದವರು ಒತ್ತಾಯ ಮಾಡುತ್ತಿದ್ದಾರೆ.
ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡುತ್ತಾ ಬಂದಿದ್ದೇವೆ. ಆದರೂ ಬಡತನ ನಿರ್ಮೂಲನೆ ಆಗಿಲ್ಲ.

ಆದ್ದರಿಂದ, ಜನಸಂಖ್ಯೆಗಿಂತಲೂ ಸಮಾಜದ ಆರ್ಥಿಕ ಪರಿಸ್ಥಿತಿ ಗಮನಿಸಿ ಮೀಸಲಾತಿ ಸೌಲಭ್ಯ ನೀಡುವ ಮೂಲಕ ಬಡತನ ನಿರ್ಮೂಲನೆ ಮಾಡಬೇಕು ಎಂದರು.

ಒಕ್ಕಲಿಗ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಲು ಸರ್ಕಾರಕ್ಕೆ ಗಡುವು ನೀಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಶೇ.12ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಉಪಜಾತಿಗಳು ಸಹಿತ ಆರ್ಥಿಕ ಪರಿಸ್ಥಿತಿಯ ವರದಿಯನ್ನು ಸಿದ್ಧಪಡಿಸಿಕೊಂಡು ಸರ್ಕಾರಕ್ಕೆ ಗಡುವು ನೀಡಬೇಕು ಎಂದು ಸಲಹೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...