Saturday, October 10, 2026
Saturday, October 10, 2026

ರೈತರು ಮತ್ತು ರೈತಮಹಿಳೆಯರಿಂದ ಕೃಷಿ ಸಾಧನೆಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

2022 23ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ)ಗಾಗಿ ಭಾಗವಹಿಸಲಿಚ್ಛಿಸುವ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸಕ್ತ 2022- 23ನೇ ಸಾಲಿನಿಂದ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯ ಕಡೆ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ರಾಜ್ಯ ಜಿಲ್ಲಾ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ, ಪ್ರವೇಶ ಶುಲ್ಕ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಅಪರ ಕೃಷಿ ನಿರ್ದೇಶಕರು (ಮಾನವ ಸಂಪನ್ಮೂಲ ಅಭಿವೃದ್ಧಿ) ತಿಳಿಸಿದ್ದಾರೆ.

ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...