ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ.ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಅದರ ಒಂದು ಭಾಗವಾಗಿ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಹಣಕಾಸು ಸಮಿತಿ, ಸಿಂಡಿಕೇಟ್ ಸಭೆಗಳ ನೇರ ಪ್ರಸಾರಕ್ಕೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಸುಶಾಸನ ದಿನ ಆಚರಿಸಲಾಗುತ್ತಿತ್ತು.
ಈ ವರ್ಷ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳು ಪೂರ್ತಿ ಸುಶಾಸನ ಮಾಸ’ವನ್ನಾಗಿ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 1ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ತಾವು ನಿರ್ವಹಿಸುವ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್/ಐಟಿಬಿಟಿ/ವಿಜ್ಞಾನ ಮತ್ತು ತಂತ್ರಜ್ಞಾನ/ ಹಾಗೂ ಕೌಶಲಾಭಿವೃದ್ಧಿ/ಉದ್ಯಮಶೀಲತೆ ಅಥವಾ ಜೀವನೋಪಾಯ ಇಲಾಖೆಗಳಲ್ಲಿ ಇದರ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ, ಅಮಾನತು ಮಾಡಿಲ್ಲ: ಸಚಿವ ಅಶ್ವತ್ಥ್ ನಾರಾಯಣ್ ವಿಶ್ವವಿದ್ಯಾಲಯದ ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಸರ್ಕಾರದ ಉದ್ದೇಶ.
ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇವುಗಳಲ್ಲಿ ಅಕಾಡೆಮಿ ಕೌನ್ಸಿಲ್, ಹಣಕಾಸು ಸಮಿತಿ ಹಾಗೂ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ವ್ಯವಸ್ಥೆಯೂ ಸೇರಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ನೇರ ಪ್ರಸಾರ ನಡೆಯಲಿದೆ. ಒಮ್ಮೆ ಜಾರಿಗೆ ಬರುತ್ತಿದ್ದಂತೆ ಕಾಯಂ ವ್ಯವಸ್ಥೆಯಾಗಿ ಮುಂದುವರಿಯಲಿದೆ ಎಂದು ವಿವರಿಸಿದರು.