ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.
ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶವಿಲ್ಲ. ಜಾರಿಗೆ ತರಲು ಸರ್ಕಾರ ಯತ್ನಿಸಿದ್ದೇ ಆದರೆ, ತೀವ್ರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಏಕರೂಪ ನಾಗರಿಕ ಸಂಹಿತೆ ಕುರಿತು ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಳಿಕ ಮೇಕೆದಾಟು ಯೋಜನೆ ಕುರಿತು ಮಾತನಾಡಿ, ನದಿ ತೀರದ ರಾಜ್ಯವಾದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರನ್ನು ಬಳಸಿಕೊಳ್ಳಲು ಸೇಲಂ ಜಿಲ್ಲೆ ಮತ್ತು ಸುತ್ತಮುತ್ತಲಿನ 4 ಲಕ್ಷ ಎಕರೆ ಭೂಮಿಗೆ ನೀರುಣಿಸಲು ಅನುಮತಿಸಲಾಗಿದೆ. ಆದರೆ, ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಬಳಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.